ಸಾಣೂರು : ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ವತಿಯಿಂದ 2025-26ನೇ ಸಾಲಿನ ದ್ವೀತಿಯ ಪಿ.ಯು.ಸಿ ಅಂತಿಮ ಪರೀಕ್ಷೆಯಲ್ಲಿ ಮತ್ತು ಎಸ್. ಎಸ್. ಎಲ್. ಸಿ (CBSE ಸೇರಿ) ಅಂತಿಮ ಪರೀಕ್ಷೆಯಲ್ಲಿ 90% ಕ್ಕಿಂತ ಅಧಿಕ ಅಂಕ ಪಡೆದ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಮತ್ತು ಇಲ್ಲಿಯ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳಿಗೆ ದಿನಾಂಕ 14-06-2026 ನೇ ರವಿವಾರ ಬೆಳಿಗ್ಗೆ 10.30 ಕ್ಕೆ ಸಾಣೂರು ರಿಜೆನ್ಸಿ ಹಾಲ್ ನ ಸಭಾಂಗಣದಲ್ಲಿ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.

