ಬಾಗಲಕೋಟೆ: ಬೈಕ್ ಹಾಗೂ ಟಂ ಟಂ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ನಾಗೂರು ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಈರಪ್ಪ ಪವಾಡಗೌಡ (45) ಹಾಗೂ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಬೋಗಾಪೂರದ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹುನಗುಂದ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಘಟನೆ ಗುರುವಾರ ತಡರಾತ್ರಿ ಸಂಭವಿಸಿದ್ದು, ಟಂಟಂನಲ್ಲಿದ್ದ ಈರಪ್ಪ ಪವಾಡಗೌಡ ಹಾಗೂ ಬೈಕ್ ಮೇಲಿದ್ದ ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗದೆ ಎಂದು ಹುನಗುಂದ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.