ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಮಣಿಪಾಲದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕಾರು ಹಾಗು ಶಿವಮೊಗ್ಗದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರುಗಳು ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ಮುಖಾಮುಖಿಯಾಗಿ ಅಪಘಾತ ಸಂಭವಿಸಿದ್ದು, ಎರಡೂ ಕಾರುಗಳು ಅಪಘಾತದ ತೀವ್ರತೆಗೆ ನುಜ್ಜುಗುಜ್ಜಾಗಿದೆ. ಪವಾಡ ಸದೃಶ್ಯವಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.