ಭಾವನಗರ: ಖಾಸಗಿ ಬಸ್‌ವೊಂದು ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ತ್ರಪಾಜ್ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.
ಭಾವನಗರದಿಂದ ಮಹುವಾ ಕಡೆಗೆ ತೆರಳುತ್ತಿದ್ದ ಬಸ್ ಹಿಂದಿನಿಂದ ಡಂಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.