Saturday, January 18, 2025
Homeಬೆಂಗಳೂರುಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸಾವು

ಬೆಂಗಳೂರಿನಲ್ಲಿ ಭೀಕರ ಅಪಘಾತ: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸಾವು

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದಲ್ಲಿ ಶನಿವಾರ ನಡೆದಿದೆ.

ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ ಇರ್ಫಾನ್ ಮೃತ ಸಹೋದರಿಯರು. ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಹೋದರಿಯರು, ಎಡಬದಿಯಿಂದ ಬಿಬಿಎಂಪಿ ಕಸದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿದ್ದಾರೆ. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಸವಾರರ ಮೇಲೆ ಹರಿದು ಹೋಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಹೆಣ್ಣೂರು ಸಂಚಾರಿ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

RELATED ARTICLES
- Advertisment -
Google search engine

Most Popular