ಮಧ್ಯಪ್ರದೇಶ: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಮನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಬೆಳಗಿನ ಜಾವ 4.30ಕ್ಕೆ ನಡೆದಿದೆ.
ನಯಾಪುರ ಪ್ರದೇಶದ ನಿವಾಸಿಗಳಾದ ದಿನೇಶ್ ಕಾರ್ಪೆಂಟರ್ (35), ಗಾಯತ್ರಿ ಕಾರ್ಪೆಂಟರ್ (30), ಇಶಿಕಾ (10) ಮತ್ತು ಚಿರಾಗ್ (7) ಮೃತಪಟ್ಟಿದ್ದವರಾಗಿದ್ದಾರೆ.
ತಕ್ಷಣ ಘಟನಾ ಸ್ಥಳಕ್ಕೆ ದೇವಾಸ್ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ದಳದ ಮೂರು ವಾಹನಗಳು ಧಾವಿಸಿದ್ದು, ಸತತ ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿ ಪ್ರಕಾರ, ನಯಾಪುರ ಪ್ರದೇಶದ ಮೂರು ಅಂತಸ್ತಿನ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ವಲ್ಪ ಸಮಯದೊಳಗೆ ಬೆಂಕಿ ದೊಡ್ಡ ಸ್ವರೂಪವನ್ನು ಪಡೆದುಕೊಂಡಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಮನೆಯಲ್ಲಿ ಇರಿಸಲಾಗಿದ್ದ ಸಿಲಿಂಡರ್ ಕೂಡ ಸ್ಫೋಟಗೊಂಡಿದೆ. ಸ್ಫೋಟದ ಸದ್ದು ಇಡೀ ಪ್ರದೇಶಕ್ಕೆ ಪ್ರತಿಧ್ವನಿಸಿದೆ. ಸ್ಫೋಟದ ಸದ್ದಿನಿಂದ ಅಕ್ಕಪಕ್ಕದವರು ಎಚ್ಚೆತ್ತುಕೊಂಡು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. 3 ಗಂಟೆಗಳ ಪ್ರಯತ್ನದ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಜಿಲ್ಲಾಡಳಿತ ತಂಡಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿ ಪುನೀತ್ ಗೆಹ್ಲೋಡ್ ಸ್ಥಳಕ್ಕೆ ಧಾವಿಸಿದ್ದಾರೆ.
ಮನೆಯೊಂದರಲ್ಲಿ ಭೀಕರ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರು ಸಾವು
RELATED ARTICLES