ಪೆರಾಜೆ ಬಳಿ ಕಾರು–ಆಟೋರಿಕ್ಷಾ ನಡುವೆ ಭೀಕರ ಅಪಘಾತ

0
8

ಸುಳ್ಯ : ಪೆರಾಜೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಸುಳ್ಯದಿಂದ ಗೋಣಿಕೊಪ್ಪದ ಕಡೆಗೆ ವಿನು ಎಂಬವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಅರಂತೋಡು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಆಟೋರಿಕ್ಷಾ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಆಟೋರಿಕ್ಷಾ ರಸ್ತೆಯಲ್ಲೇ ಪಲ್ಟಿಯಾಗಿದ್ದು, ಕಾರು ಹಾಗೂ ಆಟೋರಿಕ್ಷಾ ಎರಡೂ ವಾಹನಗಳು ಜಖಂಗೊಂಡಿವೆ. ಘಟನೆಯಲ್ಲಿ ಆಟೋರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.

ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ.