ಪುತ್ತೂರಿನಲ್ಲಿ ಭೀಕರ ಅಪಘಾತ : ಪಿಕಪ್ ವಾಹನ ಪಲ್ಟಿಯಾಗಿ ಚಾಲಕ ಸಾವು

0
110

ಪುತ್ತೂರು : ತೆಂಗಿನಕಾಯಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಪುತ್ತೂರಿನ ಕೋಡಿಂಬಾಡಿ ಅರ್ಭಿ ಸಮೀಪ ಸಂಭವಿಸಿದೆ.

ಮೃತ ಚಾಲಕನನ್ನು ಪುತ್ತೂರಿನ ಬನೂರು ನಿವಾಸಿ ಪ್ರಸಾದ್ ಎಂದು ಗುರುತಿಸಲಾಗಿದೆ. ತೆಂಗಿನಕಾಯಿ ಸಾಗಾಟ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.