ಭೀಕರ ಕೊಲೆ : ಕುಡಿತದ ಚಟದಿಂದ ಬೇಸತ್ತು ಮಗನನ್ನೆ ಕೊಂದ ತಾಯಿ!

0
12

ಮೈಸೂರು ನಗರದ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ನಡೆದ ಭೀಕರ ಹತ್ಯೆ ಪ್ರಕರಣವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕುಡಿತದ ಚಟದಿಂದ ಕುಟುಂಬಕ್ಕೆ ಕಂಟಕವಾಗಿದ್ದ ಮಗನನ್ನು ತಾಯಿಯೇ ಕೊಂದಿರುವುದು ದುಃಖಕರ ಸಂಗತಿಯಾಗಿದ್ದು, ಸಮಾಜದಲ್ಲಿ ಚರ್ಚೆಗೆ ಕಾರಣವಾಗಿದೆ.

ಎನ್.ಆರ್. ಮೊಹಲ್ಲಾ ನಿವಾಸಿ ರಮೇಶ್ (43) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಯಾಗಿರುವ ತಾಯಿ ಮಂಜುಳಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮನೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಮಂಜುಳಾ, ಮಗನ ನಿರಂತರ ಕಿರುಕುಳದಿಂದ ಮಾನಸಿಕವಾಗಿ ಕುಗ್ಗಿದ್ದರೆಂದು ತಿಳಿದುಬಂದಿದೆ.

ರಮೇಶ್ ಪ್ರತಿದಿನ ಮದ್ಯಪಾನಕ್ಕಾಗಿ ಹಣ ನೀಡುವಂತೆ ಒತ್ತಾಯಿಸುತ್ತಿದ್ದು, ತಾಯಿಗೆ ಹಿಂಸೆ ನೀಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ, ತಾಳ್ಮೆ ಕಳೆದುಕೊಂಡ ಮಂಜುಳಾ ಮಗನನ್ನು ಚಾಮುಂಡಿ ಬೆಟ್ಟದ ತಪ್ಪಲಿಗೆ ಕರೆದುಕೊಂಡು ಹೋಗಿ ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾಳೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಈ ಸಂಬಂಧ ಎನ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

LEAVE A REPLY

Please enter your comment!
Please enter your name here