ಭೀಕರ ರಸ್ತೆ ದುರಂತ : ಬಸ್‌ಗೆ ಬೆಂಕಿ, 8 ಮಂದಿ ಸಾವು

0
33

ಜೈಪುರ : ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಋಷಿಕೇಶ್‌ನಿಂದ ಮಧ್ಯಪ್ರದೇಶದ ಇಂದೋರ್‌ಗೆ ತೆರಳುತ್ತಿದ್ದ ಖಾಸಗಿ ಬಸ್ ಬೆಳಗಿನ ಜಾವ ಸುಮಾರು 3.30ರ ವೇಳೆಗೆ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ಗೆ ಬೆಂಕಿ ಹೊತ್ತಿಕೊಂಡು, ಬಳಿಕ ಎರಡೂ ವಾಹನಗಳು ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿವೆ.

ಅಧಿಕಾರಿಗಳ ಪ್ರಕಾರ, ಅಪಘಾತ ಸಂಭವಿಸಿದ ವೇಳೆ ಹೆಚ್ಚಿನ ಪ್ರಯಾಣಿಕರು ನಿದ್ರೆಯಲ್ಲಿದ್ದರು. ಡಿಕ್ಕಿಯ ರಭಸಕ್ಕೆ ಮೇಲಿನ ಸೀಟುಗಳಲ್ಲಿ ಮಲಗಿದ್ದ ಕೆಲವರು ಕೆಳಗೆ ಬಿದ್ದಿದ್ದು, ಐವರು ತೀವ್ರ ಸುಟ್ಟ ಗಾಯಗಳಿಂದ ಹಾಗೂ ಇಬ್ಬರು ತಲೆಗೆ ಗಂಭೀರ ಪೆಟ್ಟು ಬಿದ್ದು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here