ಭೀಕರ ಗಾಳಿ-ಮಳೆಗೆ ಮನೆಯ ಮೇಲ್ಚಾವಣಿ ಸಂಪೂರ್ಣ ಹಾನಿ

0
8

ಬೈಂದೂರು: ಭೀಕರ ಗಾಳಿ-ಮಳೆಯ ಅಬ್ಬರಕ್ಕೆ ಕಿರೀಮಂಜೇಶ್ವರ ಗ್ರಾಮದ ನಾಗೂರಿನ ತಿಮ್ಮಪ್ಪ ಮೊಗವೀರ ಅವರ ಮನೆಯ ಮೇಲ್ಚಾವಣಿ ಸಂಪೂರ್ಣ ಹಾನಿಗೊಳಗಾಗಿದೆ. ಘಟನೆ ಇಂದು ಬೆಳಗಿನ ಜಾವ ಸಂಭವಿಸಿದ್ದು, ಅಂದಾಜು ₹1 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ಘಟನೆ ನಡೆದ ವೇಳೆ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ.

ಸ್ಥಳೀಯರು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ನೆರವು ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here