Sunday, July 14, 2024
Homeಮಂಗಳೂರುಆಶಿಶ್ ಎಂ. ರಾವ್ ಇವರಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರತಿಭಾ ಪುರಸ್ಕಾರ 

ಆಶಿಶ್ ಎಂ. ರಾವ್ ಇವರಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರತಿಭಾ ಪುರಸ್ಕಾರ 

ಕರ್ನಾಟಕ ಸರಕಾರದ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಇಲಾಖೆ, ನೀಡುವ 2023 – 24ರ ಕಲೆ ಸಾಂಸ್ಕೃತಿಕ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ ಹೊಂದಿದ ಆಶಿಶ್ ಎಂ. ರಾವ್ ಇವರಿಗೆ ನಗದು ಪ್ರಶಸ್ತಿ ಪುರಸ್ಕಾರದೊಂದಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು  ಮಾರ್ಚ್ 8ರಂದು ಜರುಗಿದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.  ಇವರು ದ್ವಿತೀಯ ಪಿಯುಸಿಯನ್ನು ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.  ತಾಯಿ ರಾಜಶ್ರೀ ಹಾಗೂ ತಂದೆ ಮಧುಸೂದನ ಕಾರ್ಮಿಕರ ಭವಿಷ್ಯ ನಿಧಿ ಇಲಾಖೆ ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ.

RELATED ARTICLES
- Advertisment -
Google search engine

Most Popular