Sunday, July 21, 2024
Homeರಾಜ್ಯಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಅವಧಿ ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಅವಧಿ ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ

ಕರ್ನಾಟಕದಲ್ಲಿನ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡುವ ಕುರಿತು ಸಾರಿಗೆ ಇಲಾಖೆ ಈಗಾಗಲೇ ಆದೇಶ ಹೊರಡಿಸಿತ್ತು. ಈಗಾಗಲೇ ಹಲವು ಬಾರಿ ಡೆಡ್‌ಲೈನ್‌ ನೀಡಿರುವ ಇಲಾಖೆ ಇದೀಗ ಸೆಪ್ಟೆಂಬರ್‌ 15 ರ ವರೆಗೆ ನಂಬರ್‌ ಪ್ಲೇಟ್‌ ಅಳವಡಿಕೆಯ ಅವಧಿಯನ್ನು ವಿಸ್ತರಣೆ ಮಾಡಿದೆ.

ರಾಜ್ಯದಲ್ಲಿ ಸುಮಾರು 2 ಕೋಟಿಗೂ ಅಧಿಕ ವಾಹನಗಳಿದ್ದು, ಇದುವರೆಗೆ ಒಟ್ಟು ಕೇವಲ 50 ಲಕ್ಷ ವಾಹನ ಸವಾರರು ಮಾತ್ರವೇ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಯನ್ನು ಮಾಡಿದ್ದಾರೆ. ಉಳಿದ ವಾಹನ ಸವಾರರು ಇನ್ನಷ್ಟೇ ಹೊಸ ತಂತ್ರಜ್ಞಾನದ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಬೇಕಾಗಿದೆ.

ಇದೇ ಕಾರಣದಿಂದಲೇ ಇನ್ನೂ ಮೂರು ತಿಂಗಳ ಕಾಲ ಅವಧಿಯನ್ನು ವಿಸ್ತರಣೆ ಮಾಡಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪಾ ಅವರು ಆದೇಶ ಹೊರಡಿಸಿದ್ದಾರೆ. ಇದು ಕೊನೆಯ ಅವಕಾಶ ಎಲ್ಲಾ ವಾಹನ ಸವಾರರು ಕಡ್ಡಾಯವಾಗಿ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡಬೇಕು.

ಸಪ್ಟೆಂಬರ್‌ 15ರ ನಂತರವೂ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡದೇ ಇರುವ ವಾಹನಗಳಿಗೆ ದಂಡ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಜೂನ್‌ 16 ರ ವರೆಗೆ ಇದ್ದ ಅವಧಿಯನ್ನು ಜುಲೈ 4 ರ ವರೆಗೆ ವಿಸ್ತರಣೆ ಮಾಡಲಾಗಿತ್ತು. ಇದೀಗ ಮಹತ್ವದ ಸಭೆಯ ಬಳಿಕ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ.

ಅವಧಿ ಮುಗಿದ ಮೇಲೆ ದುಬಾರಿ ದಂಡ : ಸಚಿವ ರಾಮಲಿಂಗಾ ರೆಡ್ಡಿ

ಎಚ್‌ಎಸ್‌ಆ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಅವಕಾಶ ನೀಡಲಾಗಿದೆ. ಇದೀಗ ಸೆಪ್ಟೆಂಬರ್‌ 15 ರ ವರೆಗೆ ಗಡುವು ನೀಡಲಾಗಿದ್ದು, ಸೆಪ್ಟೆಂಬರ್‌ 16ರ ನಂತರ ದುಬಾರಿ ದಂಡ ವಿಧಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳ್ಳತನ ಹಾಗೂ ವಂಚನೆಯಿಂದ ರಕ್ಷಿಸುವ ಸಲುವಾಗಿ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹೆಚ್ಚುವರಿ ಭದ್ರತೆಯನ್ನು ಒದಗಿಸುತ್ತದೆ. ಹೀಗಾಗಿ ದ್ವಿಚಕ್ರ, ನಾಲ್ಕು ಚಕ್ರದ ವಾಹನ ಹಾಗೂ ಆಟೋಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ.

RELATED ARTICLES
- Advertisment -
Google search engine

Most Popular