ಬೆಂಗಳೂರು: ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸೆ. 15ರವರೆಗೆ ಗಡುವು ವಿಸ್ತರಿಸಲಾಗಿದ್ದು, ನಂತರ ಗಡುವು ವಿಸ್ತರಿಸಲಾಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಕಳೆದ 1 ವರ್ಷದಿಂದ ದಿನಾಂಕ ವಿಸ್ತರಣೆ ಮಾಡುತ್ತಲೇ ಬರುತ್ತಿದ್ದೇವೆ. ಮತ್ತೆ ದಿನಾಂಕ ವಿಸ್ತರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸೆ.16ರಿಂದ ಎಲ್ಲಾ ಜಿಲ್ಲೆಗಳಲ್ಲೂ 500 ರೂ. ದಂಡ ವಿಧಿಸಲಾಗುತ್ತದೆ. ಮೊದಲ ಸಲ 500 ರೂ. ದಂಡ ವಿಧಿಸಿದರೆ, ಎರಡನೇ ಸಲಕ್ಕೆ 1000 ರೂ. ದಂಡವಿಧಿಸಲಾಗುತ್ತದೆ. 1.49 ಕೋಟಿ ವಾಹನಗಳು ಇನ್ನೂ ಎಚ್‌ಎಸ್‌ಆರ್‌ಪಿ ಫಲಕ ಹಾಕಿಸಿಕೊಂಡಿಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ.