ಮಂಗಳೂರಿಗೆ ಹೈಕೋರ್ಟ್ ಸಂಚಾರಿ ಪೀಠ : ಮೂರು ಕೋಟಿ ವೆಚ್ಚದ ಕಟ್ಟಡ ದುರಸ್ತಿ ಪ್ರಸ್ತಾವನೆ

0
22

ಮಂಗಳೂರಿನಲ್ಲಿ  ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಲು ಜಿಲ್ಲಾಧಿಕಾರಿಯವರ ಹಳೆ ಕಟ್ಟಡದಲ್ಲಿ ಸ್ಥಾಪಿಸಲು ನಿರ್ಧರಿಸಿದ್ದು, ಸದ್ರಿ ಕಟ್ಟಡ ದುರಸ್ಥಿಗೆ ಜಿಲ್ಲಾಧಿಕಾರಿಯವರು ಸುಮಾರು ಮೂರು ಕೋಟಿ ರೂಪಾಯಿ ಖರ್ಚು ಇರುವುದಾಗಿ ತಿಳಿಸಿರುತ್ತಾರೆ.

ಹೈಕೋರ್ಟ್ ಸಂಚಾರಿ ಪೀಠದ ಸಂಚಾಲಕರಾದ ಹಾಗೂ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರು ಇಂದು ಮಾನ್ಯ ಲೋಕೋಪಯೋಗಿ ಸಚಿವರಾದ ಸನ್ಮಾನ್ಯ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.

ಶಾಸಕರ ಮನವಿಗೆ ಸ್ಪಂದಿಸಿ ಹೈಕೋರ್ಟ್ ಸಂಚಾರಿ ಪೀಠದ ಕಟ್ಟಡಕ್ಕೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯವನ್ನು ಒದಗಿಸಿಕೊಡುವುದಾಗಿ ಮಾನ್ಯ ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here