ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಪ್ರಶಸ್ತಿಗೆ ದಮಯಂತಿ ಎಂ.ಪಿ. ಆಯ್ಕೆ

0
9

ವಿರಾಜಪೇಟೆ: ಕೊಡಗು ಜಿಲ್ಲೆಯ ವಿರಾಜಪೇಟೆಯ ಶಿಕ್ಷಣ ಕ್ಷೇತ್ರದ ಸಾಧಕಿಯಾದ ದಮಯಂತಿ ಎಂ.ಪಿ. ಅವರಿಗೆ ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನ ನೀಡುವ ಪ್ರತಿಷ್ಠಿತ “ಅಂತಾರಾಜ್ಯ ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಪ್ರಶಸ್ತಿ” ಘೋಷಿಸಲಾಗಿದೆ.

ಜುಲೈ 26ರಂದು ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ ನಡೆಯಲಿರುವ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಐಎಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ.

ಶಿಕ್ಷಣ ಕ್ಷೇತ್ರದಲ್ಲಿ ದಮಯಂತಿ ಎಂ.ಪಿ. ಅವರು ಸಲ್ಲಿಸಿರುವ ವಿಶಿಷ್ಟ ಸೇವೆ, ಕನ್ನಡ ಭಾಷೆ ಹಾಗೂ ಸಾಹಿತ್ಯದ ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಘೋಷಣೆಯ ಹಿನ್ನೆಲೆಯಲ್ಲಿ ಶಿಕ್ಷಣ ಕ್ಷೇತ್ರದ ಗಣ್ಯರು, ಕನ್ನಡಾಭಿಮಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ದಮಯಂತಿ ಎಂ.ಪಿ. ಅವರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here