ಸಾಣೂರಿನಲ್ಲಿ ವಿಶ್ವ ಯೋಗ ದಿನಾಚರಣೆ ಯಶಸ್ವಿ

0
12

ಸಾಣೂರು : ವಿಶ್ವ ಯೋಗ ದಿನಾಚರಣೆಯ ಅಂಗವಾಗಿ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿ ತಮ್ಮ ಮೂಡಿಗೆರಿಸಿಕೊಂಡ ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಸಾಣೂರಿನ ಹೆಮ್ಮೆಯ ಯುವಕ ಮಂಡಲ (ರಿ.) ಸಾಣೂರು ಇವರ ಸಹಯೋಗದಲ್ಲಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ, ಕಾರ್ಕಳ ವಲಯದ ಪ್ರಾಯೋಜಕತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗುರುಪ್ರಸಾದ್ ಶೆಟ್ಟಿ ಅಧ್ಯಕ್ಷರು ಯುವಕ ಮಂಡಲ (ರಿ ) ಸಾಣೂರು ಇವರು ಕಾರ್ಯಕ್ರಮಕ್ಕೆ ಶುಭಕೋರಿದರು. ಕಾರ್ಯಕ್ರಮದಲ್ಲಿ ಯೋಗದ ಮಹತ್ವ, ಆರೋಗ್ಯಕರ ಜೀವನದಲ್ಲಿ ಯೋಗದ ಪಾತ್ರ ಹಾಗೂ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಗೆ ಯೋಗದ ಕೊಡುಗೆ ಕುರಿತು ಯೋಗ ಗುರುಗಳಾದ ನರೇಂದ್ರ ಕಾಮತ್ ಇವರು ವಿವರಿಸಿದರು .

ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆಯನ್ನು, ವಲಯದ ಹಿರಿಯ ಸದಸ್ಯರೂ ಹಾಗೂ ಯೋಗ ಗುರುಗಳಾದ ಅಶೋಕ್ ಕುಮಾರ್ ಇವರಿಂದ ನಡೆಸಲಾಯಿತು. ಭಾಗವಹಿಸಿದವರು. ಉತ್ಸಾಹದಿಂದ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರು.

ಈ ಸಂದರ್ಭದಲ್ಲಿ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿ, ಯೋಗ ಶಿಕ್ಷಣ, ತರಬೇತಿ ಹಾಗೂ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ನೀಡಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಶ್ರೀ ಕೆ. ನರೇಂದ್ರ ಕಾಮತ್ ಕಾರ್ಕಳ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಸಾಣೂರು ,ಎಸ್. ಕೆ. ಪಿ. ಎ ಜಿಲ್ಲಾ ಉಪಾಧ್ಯಕ್ಷರಾದ ದತ್ತಾತ್ರೇಯ ಹಿರಿಯಂಗಡಿ,ಎಸ್. ಕೆ. ಪಿ. ಎ ಮಾಜಿ ಅಧ್ಯಕ್ಷರಾದ ಜಗದೀಶ್ ಸಾಣೂರು,ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ಹಾಗೂ ಯುವಕ ಮಂಡಲ ಸಾಣೂರು ಇದರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎಸ್. ಕೆ. ಪಿ. ಎ ಅಧ್ಯಕ್ಷರಾದ ಪ್ರಮೋದ್ ಚಂದ್ರ ಪೈ ಸ್ವಾಗತಿಸಿದರು, ಕೋಶಧಿಕಾರಿಗಳಾದ ವಿ. ಆರ್. ಸತೀಶ್ ಆಚಾರ್ಯ ಇವರು ವಂದಿಸಿದರು.

LEAVE A REPLY

Please enter your comment!
Please enter your name here