
ಮಂಗಳೂರು : ಚಿನ್ನದ ಪದಕ ವಿಜೇತೆ ಪೂವಮ್ಮ ಅವರ ಉರ್ವಸ್ಟೋರ್‌ನಲ್ಲಿರುವ ನಿವಾಸಕ್ಕೆ ತೆರಳಿದ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರು ಪೂವಮ್ಮ ಅವರನ್ನು ಆತ್ಮೀಯವಾಗಿ ಗೌರವಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಪೂವಮ್ಮ ಅವರಿಗೆ ಶಾಲು ಹೊದಿಸಿ, ಸಿಹಿತಿಂಡಿ ನೀಡಿ ಅವರ ಸಾಧನೆಯನ್ನು ಸಂಭ್ರಮಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಗೆ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಪೂವಮ್ಮ ಅವರ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಕುಟುಂಬಸ್ಥರು, ಅಭಿಮಾನಿಗಳು, ಕ್ರೀಡಾಪಟುಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಶುಭಾಶಯಗಳನ್ನು ಸಲ್ಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
