ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯವತಿಯಿAದ ಅಕ್ಟೋಬರ್ 22 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆಯ ಎಂ.ಸಿ.ಸಿ. `ಬಿ’ ಬ್ಲಾಕ್ನಲ್ಲಿರುವ 7ನೇ ಮುಖ್ಯ ರಸ್ತೆಯಲ್ಲಿರುವ “ಆಶ್ರಯ’ ಹಿರಿಯ ವನಿತೆಯರ ಆನಂದಧಾಮ (ವೃದ್ಧಾಶ್ರಮ)ದಲ್ಲಿ ದಸರಾ ಸಂಭ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಎಲ್. ರಾಯ್ಕರ್ ತಿಳಿಸಿದ್ದಾರೆ.
ಕಲಾಕುಂಚದ ಸಮಿತಿ ಸದಸ್ಯರಾದ ಶ್ರೀಮತಿ ಸವಿತಾ ವಿಜಯಕುಮಾರ್ ಕೂಲಂಬಿಯವರ ನೇತೃತ್ವದಲ್ಲಿ ಆಶ್ರಮದ ಹಿರಿಯರಿಗೆ ಪ್ರೀತಿಯಿಂದ ಬನ್ನಿ ಮುಡಿದು ನಡೆಯುವ ಈ ದಸರಾ ಸಂಭ್ರಮದಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆಯುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.
ಕಲಾಕುಂಚದ ವಿವಿಧ ಬಡಾವಣೆಯ ಶಾಖೆಯ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದಸರಾ ಸಂಭ್ರಮ ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9986044145 ಈ ಸನೀಹವಾಣಿಗೆ ಸಂಪರ್ಕಿಸಬಹುದು.
