ದೀಪಾವಳಿ ಪ್ರಯುಕ್ತ ಅಳದಂಗಡಿ ರಿಕ್ಷಾ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ

0
10

ಬೆಳ್ತಂಗಡಿ : ದೀಪಾವಳಿ ಹಬ್ಬದ ಪ್ರಯುಕ್ತ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಮೊಗ್ರು ಗ್ರಾಮದ ಅಳದಂಗಡಿ ರಿಕ್ಷಾ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ರಿಕ್ಷಾ ಪಾರ್ಕ್‌ನ ಮಾಲಕರು ಹಾಗೂ ಚಾಲಕರು ಒಗ್ಗೂಡಿ ಪಾರ್ಕ್‌ನ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಕಸಕಡ್ಡಿಗಳನ್ನು ತೆರವುಗೊಳಿಸಿ, ಸಾರ್ವಜನಿಕ ಸ್ಥಳವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಕಾರ್ಯದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡರು.

ಈ ಸಂದರ್ಭದಲ್ಲಿ ರಿಕ್ಷಾ ಪಾರ್ಕ್‌ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯಕ್ಕೆ ಕೈಜೋಡಿಸಿದರು.

ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಸ್ವಚ್ಛತೆಯ ಮಹತ್ವವನ್ನು ಸಾರಿದ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.