Sunday, January 19, 2025
Homeಮಂಗಳೂರುಗುರುಪುರ: ಗೋಮಾಂಸ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಗುರುಪುರ: ಗೋಮಾಂಸ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮಂಗಳೂರು: ಗೋವನ್ನು ಮಾಂಸ ಮಾಡಿ ಮಾರಾಟ ಮಾಡಲು ವಾಹನದಲ್ಲಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋಮಾಂಸ ಸಹಿತ ಬಜಪೆ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುಪುರ ಕೈಕಂಬದ ವಿಕಾಸ್ ನಗರದಲ್ಲಿ ಡಿ.26ರಂದು ನಡೆದಿದೆ.

ಇಬ್ಬರು ಮುಸ್ಲಿಂ ವ್ಯಕ್ತಿಗಳು ಟೆಂಪೋ ವಾಹನದಲ್ಲಿ ಗೋಮಾಂಸವನ್ನು ತುಂಬಿಸಿ ಸಾಗಾಟ ಮಾಡುತ್ತಿರುವ ವಿಚಾರ ತಿಳಿದ ಸ್ಥಳೀಯ ಬಜರಂಗದಳ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಬಜಪೆ ಪೊಲೀಸರು ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇವರು ಗೋಮಾಂಸವನ್ನು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದರು ಎಂದು ತಿಳಿಸಿದ್ದಾರೆ.

ಆರೋಪಿಗಳಲ್ಲಿ ವಾಹನ ಚಾಲಕನನ್ನು ಕುಪ್ಪೆಪದವು ಅಂದೇಲ್ ನಿವಾಸಿ ಅಜೀಜ್ ಎಂದು ಈತ ಹಿಂದೆಯೂ ಹಲವು ಪ್ರಕರಣಗಳ ಆರೋಪಿ ಎಂದು ತಿಳಿದುಬಂದಿದೆ. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.

RELATED ARTICLES
- Advertisment -
Google search engine

Most Popular