ಮೂಡುಬಿದಿರೆ: ಮೂಡುಬಿದಿರೆಯಿಂದ ಸಚ್ಚರಿಪೇಟೆ ಹೋಗುವ ರಸ್ತೆಯ ಪಾಲಡ್ಕ ಬಳಿ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಭಕ್ಕೆ ಡಿಕ್ಕಿ ಹೊಡೆದ ಘಟನೆ ಜು.11ರ ಸಂಜೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಟಿಪ್ಪರ್ ಮೇಲೆಯೇ ಮುರಿದು ಬಿದ್ದಿದ್ದು, ದೊಡ್ಡ ಅನಾಹುತವೊಂದು ಕೂದಳೆಲೆಯ ಅಂತರದಲ್ಲಿ ತಪ್ಪಿದೆ. ಘಟನೆಯಿಂದ ಟಿಪ್ಪರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸಣ್ಣಪುಟ್ಟ ಗಾಯಗೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ಕಂಬವನ್ನು ತೆರವುಗೊಳಿಸಿ, ದುರಸ್ತಿ ಕಾರ್ಯ ನಡೆಸಿದ್ದಾರೆ.