ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿಯ ಉಣಕಲ್ ನಿವಾಸಿ ಪ್ರಕಾಶ ಬಾರಕೇರ (42) ಮೃತ ಮೃತ ಅಯ್ಯಪ್ಪ ಮಾಲಾಧಾರಿ.
ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27) ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದು, ಪ್ರಕಾಶ್ ಬಾರಕೇರ ಅವರ ಮಗ ವಿನಾಯಕ್ ಕಿಮ್ಸ್‌ನಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.