ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯನ್ನು ಮೊಬೈಲ್ ಫೋನ್ ಕೊಡಿಸುವ ನೆಪದಲ್ಲಿ ಹುಬ್ಬಳ್ಳಿಗೆ ಕರೆತಂದಿದ್ದ ಯುವಕನೋರ್ವ ತನ್ನ ಗೆಳೆಯರ ಜೊತೆ ಸೇರಿಕೊಂಡು ಗ್ಯಾಂಗ್ ರೇಪ್ ಮಾಡಿದ ಪ್ರಕರಣ ಹುಬ್ಬಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಜೀವ ಬೆದರಿಕೆ ಹಾಕಿ ಬಲವಂತವಾಗಿ ನಾಲ್ವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಘಟನೆ ಹುಬ್ಬಳ್ಳಿಯ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ಬುಧವಾರ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಜೊತೆಗೆ ಕೆಲ ದಿನಗಳಿಂದ ಫೋನ್‌ನಲ್ಲಿ ಓರ್ವ ಯುವಕ ಮಾತನಾಡುತ್ತಿದ್ದ. ಇಬ್ಬರ ನಡುವೆ ಸ್ನೇಹ ಸಹ ಬೆಳೆದಿತ್ತು. ಈ ಸಲುಗೆಯಿಂದ ಮೊಬೈಲ್ ಕೊಡಿಸುವ ಆಮಿಷ ತೋರಿಸಿ, ಬಾಲಕಿಯನ್ನು ಗ್ರಾಮದಿಂದ ಹುಬ್ಬಳ್ಳಿಗೆ ಕರೆಸಿದ್ದ ಬಾಲಕಿ ಜೊತೆಗೆ ಸಿಟಿ ಸುತ್ತಿ ನಂತರ ಖಾಸಗಿ ಹೋಟೆಲ್‌ವೊಂದಕ್ಕೆ ಕರೆದುಕೊಂಡು ಹೋದ ಯುವಕ ತನ್ನ ಮತ್ತೊಬ್ಬ ಸ್ನೇಹಿತನ ಜೊತೆ ಸೇರಿಕೊಂಡು ಬಾಲಕಿ ಮೇಲೆ ಹಲ್ಲೆ ನಡೆಸಿದ್ದಾನೆ.