Monday, July 15, 2024
Homeರಾಜ್ಯಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯ ಹತ್ಯೆಗೈದ ಪತಿ

ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯ ಹತ್ಯೆಗೈದ ಪತಿ

ಹಾಸನ: ಇಲ್ಲಿನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ಪೊಲೀಸ್‌ ಪೇದೆಯೊಬ್ಬ ತನ್ನ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಘಟನೆ ನಡೆದಿದೆ. ಹಾಸನ ನಗರ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ಲೋಕನಾಥ ಮತ್ತು ಮಮತಾ ಮಧ್ಯೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ. ಕಳೆದ 4-5 ದಿನಗಳಿಂದ ದಂಪತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲೆಂದು ಎಸ್ಪಿ ಕಚೇರಿಗೆ ಪತ್ನಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ.


ಪತ್ನಿ ತನ್ನ ವಿರುದ್ಧ ದೂರು ನೀಡಲೆಂದು ಎಸ್ಪಿ ಕಚೇರಿಗೆ ಬಂದಿದ್ದಾಳೆಂದು ಅರಿತು, ಬರುತ್ತಿರುವುದನ್ನು ಗಮನಿಸಿದ ಲೋಕನಾಥ ಆಕೆಯ ಎದೆಗೆ ಚೂರಿಯಿಂದ ಇರಿದಿದ್ದಾನೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತೂ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಘಟನೆಯ ಬಳಿಕ ಪರಾರಿಯಾಗಿದ್ದ ಲೋಕನಾಥನನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular