ನೈಟಿ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಪತಿ

0
186

ಬೆಳಗಾವಿ: ಪತ್ನಿ ಸೀರೆ ಬದಲು ನೈಟಿ ಧರಿಸಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಪತಿ ಬೆಂಕಿ ಹಚ್ಚಿದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹತ್ತರವಾಡ ಗ್ರಾಮದಲ್ಲಿ ನಡೆದಿದೆ.

ಕೃಷ್ಣಾ ಪಾಟೀಲ್ ಎಂಬಾತ ತನ್ನ ಪತ್ನಿ ಮಂಜುಳಾ ಪಾಟೀಲ್ ಮೇಲೆ ಈ ಕೃತ್ಯ ಎಸಗಿದ್ದಾನೆ. ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಂಜುಳಾಳನ್ನು ಸ್ಥಳೀಯರು ತಕ್ಷಣ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ಅವರು ಬೆಳಗಾವಿಯ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಂಪತಿಗಳ ನಡುವೆ ಕಳೆದ ಕೆಲವು ದಿನಗಳಿಂದ ನೈಟಿ ಧರಿಸುವ ವಿಚಾರಕ್ಕೆ ಸಂಬಂಧಿಸಿ ಜಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ. ಪತಿಯ ವಿರೋಧದ ನಡುವೆಯೂ ಮಂಜುಳಾ ನೈಟಿ ಧರಿಸಿದ್ದರಿಂದ ಆಕ್ರೋಶಗೊಂಡ ಕೃಷ್ಣಾ ಪಾಟೀಲ್ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಘಟನೆ ವೇಳೆ ಬೆಂಕಿ ತಗುಲುತ್ತಿದ್ದಂತೆ ಮಂಜುಳಾ ಸಹಾಯಕ್ಕಾಗಿ ಕೂಗಿಕೊಂಡಿದ್ದು, ಆಕೆಯ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ, ಆಕೆಯನ್ನು ರಕ್ಷಿಸಿದ್ದಾರೆ.

ಎಂಟು ವರ್ಷಗಳ ಹಿಂದೆ ಈ ದಂಪತಿಗಳ ವಿವಾಹವಾಗಿತ್ತು. ಘಟನೆ ಕುರಿತು ಮಾಹಿತಿ ತಿಳಿದುಕೊಂಡ ಸ್ಥಳೀಯರು ನಂದಗಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here