Sunday, July 14, 2024
Homeಮೂಡುಬಿದಿರೆನಾನು ಜಗತ್ತಿನ ಅತ್ಯ೦ತ ಉತ್ತಮ ವೃತ್ತಿಯಲ್ಲಿದ್ದೇನೆ: ಡಾ. ಪಾರಿತೋಶ್ ಬಲ್ಲಾಳ್

ನಾನು ಜಗತ್ತಿನ ಅತ್ಯ೦ತ ಉತ್ತಮ ವೃತ್ತಿಯಲ್ಲಿದ್ದೇನೆ: ಡಾ. ಪಾರಿತೋಶ್ ಬಲ್ಲಾಳ್

ಮೂಡುಬಿದಿರೆ ಎಕ್ಸಲೆ೦ಟ್ ನಲ್ಲಿ “ಸ್ಪರ್ದಾತ್ಮಕ ಪರೀಕ್ಷೆಯಲ್ಲಿ ಯಶಸ್ಸು” ಕುರಿತು ಸಂವಾದ ಕಾರ್ಯಕ್ರಮ

ಮೂಡುಬಿದಿರೆ : “ವೈದ್ಯಕೀಯ ಬಹಳ ಪವಿತ್ರವಾದ ವೃತ್ತಿ. ಆ ವೃತ್ತಿಯ ಎಲ್ಲಾ ತ್ಯಾಗ ಮತ್ತು ಸವಾಲುಗಳ ನಡುವೆಯೂ ಅದು ಬಹಳ ಸಂತೃಪ್ತಿಯನ್ನು ನೀಡುವ ವೃತ್ತಿ. ಈ ನಿಟ್ಟಿನಲ್ಲಿ ನಾನು ಜಗತ್ತಿನ ಅತ್ಯಂತ ಉತ್ತಮ ವೃತ್ತಿಯಲ್ಲಿದ್ದೇನೆ” ಎಣದು ಬೆಂಗಳೂರಿನ ಶ್ರೀ ಜಯದೇವ ಇನ್ಸಿಟ್ಯೂಟ್ ಆಫ್ ಕಾರ್ಡಿಯೊವಾಸ್ಕುಲರ್ ಸಾಯನ್ಸಸ್ ಎಂಡ್ ರೀಸರ್ಚ್ ನ ಸಹಾಯಕ ಪ್ರಾಧ್ಯಾಪಕ ಡಾ. ಪಾರಿತೋಶ್ ಬಲ್ಲಾಳ್ ಹೇಳಿದರು. ಅವರು ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ನಡೆಸಿದ, “ನೀಟ್ ಪರೀಕ್ಷೆಯ ಯಶಸ್ಸಿನ ಸೂತ್ರ”ದ ಕುರಿತ ವಿಷಯದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡುತ್ತಿದ್ದರು. ವೈದ್ಯನಾಗಲು ಪಡಬೇಕಾದ ತ್ಯಾಗ, ಶ್ರಮದ ಬಗ್ಗೆ ವಿದ್ಯಾರ್ಥಿಯೊಬ್ಬನು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಹೃದಯ ತಜ್ಞನಾಗಲು ಹದಿಮೂರು ವರ್ಷ ಬೇಕಾಗುತ್ತದೆ ಎಂದರು. “ಈ ಎರಡು ವರ್ಷಗಳಲ್ಲಿ ನೀವು ಎದುರಿಸುವ ಕಷ್ಟಗಳು ನಿಮ್ಮ ಭವಿಷ್ಯತ್ತಿಗೆ ನಿಮ್ಮನ್ನು ತಯಾರಿಸುತ್ತದೆ. ದೊಡ್ಡ ಕನಸನ್ನು ಕಾಣಲು ಹಿಂಜರಿಯಬೇಡಿ. ಪ್ರಥಮ ಪದವಿಪೂರ್ವದಲ್ಲಿ ನಾನು ಕಡಿಮೆ ಅಂಕಗಳನ್ನು ಗಳಿಸಿದ್ದೆ. ಆಗ ನನ್ನ ಪ್ರಾಂಶುಪಾಲರ ಮಾರ್ಗದರ್ಶನದಿಂದ ಆದ್ಯತೆಗಳಿಗನುಗುಣವಾಗಿ ನನ್ನ ಚಟುವಟಿಗಳನ್ನು ಆಯ್ದುಕೊ೦ಡು ನನ್ನ ಗುರಿಯನ್ನು ತಲುಪಲು ಸಾಧ್ಯವಾಯಿತು. ನಿಮ್ಮ ಪ್ರಸ್ತುತ ಪರಿಸ್ಥಿತಿ ಹೇಗೆಯೇ ಇದ್ದರೂ ಉತ್ಕೃಷ್ಟವಾದುದನ್ನು ಸಾಧಿಸಲು ಸಾಧ್ಯ. ನಿಮ್ಮ ಕಲಿಕೆಯ ಶೈಲಿಯನ್ನು ಅರಿತುಕೊಳ್ಳಿ, ಉತ್ತಮ ನೆನಪಿಗಾಗಿ ನೀವು ಗಳಿಸಿದ ಜ್ಞಾನವನ್ನು ನಿಮ್ಮ ಪರಿಸರದ ಜೊತೆ ಹೊಂದಿಸಿ, ಅದರ ಜೊತೆಗೆ ವ್ಯಾಯಾಮವನ್ನು ಮಾಡಿ, ನಿಮ್ಮ ಕಲಿಕಾ ಸಾಮಾಗ್ರಿಗಳನ್ನು ಸರಿಯಾಗಿ ಜೋಡಿಸಿಕೊಳ್ಳಿ, ನಿಮ್ಮ ಗುರಿಯನ್ನು ದೃಶ್ಯೀಕರಿಸಿ, ಅನೇಕ ಪುನರಾವರ್ತನೆಗಳನ್ನು ಮಾಡಿ” ಎಂದರು.

ಎಕಾಗ್ರತೆಗೆ ಭಂಗ ತರುವ ಅನೇಕ ವಿಚಾರಗಳ ನಡುವೆ ನಮ್ಮ ಗುರಿಯಯೆಡೆಗೆ ಹೇಗೆ ಕೇಂದ್ರೀಕರಿಸುವುದು ಎಂದು ವಿದ್ಯಾರ್ಥಿನಿಯೊಬ್ಬಳು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಏಕಾಗ್ರತೆಯನ್ನು ಸಾಧಿಸುವುದು ಸವಾಲಾದರೂ ಅಸಾಧ್ಯವಲ್ಲ ಎ೦ಂದರು. “ನಿಮ್ಮ ಹೆತ್ತವರು ನಿಮಗೋಸ್ಕರ ಮಾಡಿರುವ ತ್ಯಾಗವನ್ನು ನೆನಸಿಕೊಳ್ಳಿ. ಅವರಿಂದ ಸ್ಪೂರ್ತಿ ಪಡೆಯಿರಿ. ಸಮಾನ ಗುರಿ ಇರುವ ಸಮಾನ ಮನಸ್ಕ ವಿದ್ಯಾರ್ಥಿಗಳೊಂದಿಗೆ ಬೆರೆಯಿರಿ. ಇದರಿಂದ ನಿಮ್ಮ ಗುರಿಯತ್ತ ಗಮನಹರಿಸಲು ಸಾಧ್ಯವಾಗುವುದು” ಎಂದರು. ಹೆತ್ತವರಿಂದ ದೂರ ಇರುವುದರ ಮೂಲಕ ವಿದ್ಯಾರ್ಥಿಗಳು ಮಾಡುವ ತ್ಯಾಗವು ಮುಂದೆ ಭವಿಷ್ಯದ ಸವಾಲುಗಳನ್ನು ಎದುರಿಸಲು ಸೂಕ್ತ ತಯಾರಿಯಾಗುತ್ತದೆ ಎಂದರು. ಅತಿ ದೊಡ್ಡ ಗುರಿಯನ್ನು ತಲುಪುವ ಸವಾಲನ್ನು ಚಿಂತೆಯಿಲ್ಲದೇ ನಿರ್ವಹಿಸುವುದು ಹೇಗೆ ಎಂದು ವಿದ್ಯಾರ್ಥಿನಿಯೊಬ್ಬಳು ಕೇಳಿದ ಪ್ರಶ್ನೆಗೆ ಊತ್ತರಿಸುತ್ತಾ, ದೊಡ್ಡ ಗುರಿಯಿಂದ ವಿಚಲಿತರಾಗುವ ಬದಲು ಗುರಿಯನ್ನು ಸಣ್ಣ ಗುರಿಗಳಾಗಿ ಪರಿವರ್ತಿಸಬೇಕು ಎಂದರು. “ಒಬ್ಬ ವ್ಯಕ್ತಿಯನ್ನು
ಮಾದರಿಯಾಗಿಟ್ಟುಕೊಂಡು ಅವರಿಂದ ಸ್ಪೂರ್ತಿ ಪಡೆಯಬೇಕು. ಇದರಿಂದು ದೊಡ್ಡ ಗುರಿಯ ಹೆಮ್ಮರವಾಗಿ ಕಾಡುವುದಿಲ್ಲ” ಎಂದರು ಜೀವನದಲ್ಲಿ ನೆಲೆಗೊಳ್ಳುವ ಬಗ್ಗೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ವೈದ್ಯರು ಉತ್ತರಿಸುತ್ತಾ ಹಣಕ್ಕೋಸ್ಕರ ಕೆಲಸ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು. “ಹಣ ಸಹಜವಾಗಿಯೇ ಸಮಯ ಕಳೆದಂತೆ ಬರುತ್ತದೆ. ಆದರೆ ಜನರ ಬದುಕನ್ನು ಬದಲಿಸಲು ನೀವು ಕೆಲಸ ಮಾಡಬೇಕು” ಎಂದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಯುವರಾಜ ಜೈನ್ ಡಾ ಪಾರಿತೋಶ್ ಬಲ್ಲಾಳರನ್ನು ಸಂಸ್ಥೆಯ ವತಿಯಿಂದ ಗೌರವಿಸಿ, ಗುರಿಯನ್ನು ತಲುಪಲು ಅವರು ನೀಡಿದ ಸಲಹೆಯನ್ನು ಪಾಲಿಸುವಂತೆ ವಿದ್ಯಾರ್ಥಿಗಳಿಗೆ ಹೇಳಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಅಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿನೋಲಿಯ ಪ್ರಿಯಾಂಕ ಕಾರ್ಯಕ್ರಮ ನಿರೂಪಿಸಿ ವ೦ದಿಸಿದರು.

RELATED ARTICLES
- Advertisment -
Google search engine

Most Popular