Monday, January 13, 2025
Homeಮೂಡುಬಿದಿರೆಮೂಡುಬಿದಿರೆ: ಡಿ. 29ರಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ

ಮೂಡುಬಿದಿರೆ: ಡಿ. 29ರಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ

ಮೂಡುಬಿದಿರೆ: ʻವಿದ್ಯೆ-ಉದ್ಯೋಗ-ಸಂಪರ್ಕ’ ಎಂಬ ಧೈಯದೊಂದಿಗೆ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಅಲ್ಲದೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿ ಒಟ್ಟು 35 ಘಟಕಗಳನ್ನು, 4072 ಸಕ್ರಿಯ ಸದಸ್ಯರನ್ನು ಹೊಂದಿರುವ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 37ನೇ ವಾರ್ಷಿಕ ಸಮಾವೇಶ ಇಲ್ಲಿನ ಸೈಟ್ ಗೈಟ್ಸ್ ಕನ್ನಡ ಭವನದಲ್ಲಿ ಡಿ. 29ರಂದು ಬೆಳಗ್ಗೆ 9:30 ರಿಂದ ಜರಗಲಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದ ಉದ್ಘಾಟನೆಯನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ. ಪೂಜಾರಿ ವಹಿಸಲಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್, ಪ್ರಸಸ್ತಿ ಪ್ರದಾನ ಮಾಡಲಿದ್ದಾರೆ. ʻಯುವಸಿಂಚನ’ ವಾರ್ಷಿಕ ವಿಶೇಷಾಂಕವನ್ನು ಭಾರತ್ ಕೋ-ಒಪರೇಟಿವ್ ಬ್ಯಾಂಕ್ ಮುಂಬೈ ಇದರ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಬಿಡುಗಡೆಗೊಳಿಸಲಿರುವರು. ಕಾರ್ಯಕ್ರಮದಲ್ಲಿ ಬೆಂಗಳೂರು ಹೈಕೋರ್ಟ್‌ನ ನಿರ್ದೇಶಿತ ಹಿರಿಯ ನ್ಯಾಯವಾದಿ ಇರುವೈಲ್ ತಾರಾನಾಥ ಪೂಜಾರಿ, ಮಂಗಳೂರು ವಿಕಾಸ ಕಾಲೇಜಿನ ಟ್ರಸ್ಟಿ ಸೂರಜ್ ಕುಮಾರ್ ಕಲ್ಯಾ, ಮೂಡುಬಿದಿರೆ ರತ್ನ ವುಮೆನ್ಸ್ ಕ್ಲಿನಿಕ್‌ನ ಡಾ. ರಮೇಶ್, ಉದ್ಯಮಿ ದಿನೇಶ್ ಅಮೀನ್ ಕುಂದಾಪುರ, ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ. ಪೂಜಾರಿ, ಉಡುಪಿ ಕೋಟ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಸುನಿತಾ ವಿ. ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.
ಭಾಸ್ಕರ್ ಎಸ್. ಕೋಟ್ಯಾನ್ ಕೊಳಕೆ ಇರ್ವತ್ತೂರು ಇವರಿಗೆ ಯುವವಾಹಿನಿಯ ಪ್ರತಿಷ್ಠಿತ ʻಸಾಧನ ಶ್ರೀ’ ಪ್ರಶಸ್ತಿ ಪುರಸ್ಕಾರ ನೀಡಲಾಗುವುದು, ಬಿಲ್ಲವ ಸಮಾಜ ಸೇವಾ ಸಂಘರಿ ಮುಲ್ಕಿ ಇವರಿಗೆ ʻಸಾಧನಾ ಶ್ರೇಷ್ಠ’ ಪ್ರಶಸ್ತಿ ಪುರಸ್ಕಾರ ನೀಡಲಾಗುವುದು. ಸಂಗೀತ ಕ್ಷೇತ್ರದ ಸಾಧಕರಾದ ಸಚಿತ್ ಪೂಜಾರಿ ನಂದಳಿಕೆ, ಸಾಂಸ್ಕೃತಿಕ ಜಾನಪದ ಸಂಶೋಧನೆ ಸಂಘಟನೆ ಈ ಕ್ಷೇತ್ರದಲ್ಲಿ ಸಾಧನೆ ಮಾಡಿದ ದಿನೇಶ್ ಸುವರ್ಣ ರಾಯಿ, ಕ್ರೀಡಾ ಕ್ಷೇತ್ರದ ಸಾಧಕರಾದ ಕುಮಾರಿ ರಕ್ಷಾ ರೆಂಜಾಳ, ಸಾಮಾಜಿಕ ಕ್ಷೇತ್ರದ ಸಾಧನೆಗೆ ಶ್ರೀಕುಮಾರ್ ಪೂಜಾರಿ ಇರುವೈಲ್, ವೈದ್ಯಕೀಯ ಕ್ಷೇತ್ರದ ಸಾಧನೆಗೆ ಡಾ. ಆನಂದ ಬಂಗೇರ ಇವರಿಗೆ ʻಯುವವಾಹಿನಿ ಗೌರವ ಅಭಿನಂದನೆ’, ಡಾ. ಶಿಲ್ಪಾ ದಿನೇಶ್, ಡಾ. ಉಷಾ ಇವರಿಗೆ ʻಯುವವಾಹಿನಿ ಅಭಿನಂದನೆ’, ಕುಮಾರಿ ಪ್ರಕೃತಿ ಮಾರೂರು ಇವರಿಗೆ ʻಯುವವಾಹಿನಿ ಸಾಧಕ’ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ 35 ಘಟಕಗಳ ಎಲ್ಲಾ ಸದಸ್ಯರು ಪ್ರತಿನಿಧಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹರೀಶ್ ಕೆ ಪೂಜಾರಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ., ಮೂಡುಬಿದಿರೆ ಘಟಕದ ಅಧ್ಯಕ್ಷರು, ಸಮಾವೇಶದ ಸಂಚಾಲಕರಾದ ಶಂಕರ್ ಎ. ಕೋಟ್ಯಾನ್, ಸಮಾವೇಶ ನಿರ್ದೆಶಕರಾದ ಗಣೇಶ್ ವಿ ಕೋಡಿಕಲ್, ಮೂಡಬಿದ್ರಿ ಘಟಕದ ಕೋಶಾಧಿಕಾರಿ ಪ್ರತಿಭಾ ಸುರೇಶ್‌, ಯುವ ವಾಹಿನಿ ಮೂಡುಬಿದಿರೆ ಘಟಕದ ನಿಯೋಜಿತ ಅಧ್ಯಕ್ಷ ಮುರಳೀಧರ ಕೋಟ್ಯಾನ್‌ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular