ಸಾಧಿಸುವ ಮನಸ್ಸು ಮತ್ತು ಧೈರ್ಯ ಇದ್ದರೆ ಅಂಗ ವೈಕಲ್ಯ ದೊಡ್ಡದಲ್ಲ ಕುಮಾರಿ ಸಬಿತಾ ಮೊನಿಸ್

0
11


ಮೂಡುಬಿದಿರೆ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರ್ ಇಲ್ಲಿ ನಡೆದ ಸಂಭ್ರಮ ಶನಿವಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಶೇಷ ಚೇತನ ವ್ಯಕ್ತಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಕುಮಾರಿ ಸಬಿತ ಮೋನಿಸ್ ಇವರು ತಮ್ಮ ಜೀವನದ ಯಶೋಗಾಥೆಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು ತಾವು ಬಾಲ್ಯದಿಂದ ನಡೆದು ಬಂದ ದಾರಿಯನ್ನು ವಿವರಿಸಿ ಮಕ್ಕಳು ಕೇಳಿದ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿ ಧೈರ್ಯದಿಂದ ಮುನ್ನುಗ್ಗಿ ವೈಕಲ್ಯವನ್ನು ಮೆಟ್ಟಿ ನಿಲ್ಲಬೇಕು ಎಂದು ಹೇಳಿದರು ಕಾರ್ಯಕ್ರಮದಲ್ಲಿ ಪತ್ರಕರ್ತ ಪುತ್ತಿಗೆ ಮನೆ ಧನಂಜಯ ಉಪಸ್ಥಿತರಿದ್ದರು ಮುಖ್ಯ ಶಿಕ್ಷಕ ಪ್ರಸನ್ನ ವಿ ಶೆಣೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರೆ ಸಹ ಶಿಕ್ಷಕ ರಾಬರ್ಟ್ ಡಿಸೋಜಾ ಧನ್ಯವಾದ ನೀಡಿದರು ಸ್ವಯಂಸೇವಕ ಶಿಕ್ಷಕಿ ಶ್ರೀಮತಿ ಪ್ರತಿಭಾ ಮತ್ತು ಪ್ರಜ್ವಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here