ಉರುವಾಲು : ಎ 06 ಬೆಳ್ತಂಗಡಿ ತಾಲೂಕಿನ ಉರುವಾಲು ಪದವು ಹಾಗೂ ಇಳಂತಿಲ ಗ್ರಾಮದ ಸಂಪರ್ಕ ಕೊಂಡಿಯಾದ ಉರುವಾಲು -ಕಾಯರ್ಪಾಡಿ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರಿಗೆ ಉರುವಾಲು, ಇಳಂತಿಲ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

