ಮದ್ದೂರು: ಪಟ್ಟಣದ ಬಳೇಪೇಟೆಯ 9ನೇ ವಾರ್ಡಿನಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ಬುಧವಾರ ಪಟ್ಟಣ ಪಂಚಾಯಿತಿ ಅಧಿಕಾರಿಗಳ ತಂಡ ದಾಳಿ ನಡೆಸಿ ಮಾಂಸವನ್ನು ವಶಪಡಿಸಿಕೊಂಡಿದೆ.
ಬಳೇಪೇಟೆಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ನಡೆಯುತ್ತಿದೆ ಎಂದು ಮದ್ದೂರು ಗ್ರಾಮದ ಯೋಗೇಶ್ ಎಂಬುವರು ಪಟ್ಟಣ ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿ ರಾಘವೇಂದ್ರ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ದಾಳಿಯ ವೇಳೆ ಅಂಗಡಿಯಲ್ಲಿದ್ದ ಮಾಂಸವನ್ನು ಅಧಿಕಾರಿಗಳು ವಶಪಡಿಸಿಕೊಂಡು, ಪೌರ ಕಾರ್ಮಿಕರ ಸಹಾಯದಿಂದ ಮಣ್ಣಿನಲ್ಲಿ ಹೂತು ವಿಲೇವಾರಿ ಮಾಡಿದರು. ಗೋಮಾಂಸ ಮಾರಾಟ ಮಾಡುತ್ತಿದ್ದ ನಟರಾಜು ಅವರಿಗೆ ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆ ನಡೆಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

