Wednesday, April 23, 2025
HomeUncategorizedತರಕಾರಿ ಸಾಗಾಟದ ವಾಹನದಲ್ಲಿ ಅಕ್ರಮ ಗೋ ಸಾಗಾಟ

ತರಕಾರಿ ಸಾಗಾಟದ ವಾಹನದಲ್ಲಿ ಅಕ್ರಮ ಗೋ ಸಾಗಾಟ

ಮಂಗಳೂರಿಗೆ ಅಕ್ರಮವಾಗಿ ಗೋ ಸಾಗಾಟ ನಡೆಸಲು ಹೊರಟ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ಜಾನುವಾರು ಸಾಗಾಟದ ವಾಹನವನ್ನು ತಡೆಹಿಡಿಯಲಾಗಿದೆ.
ಹಿಂಸಾತ್ಮಕವಾಗಿ ತರಕಾರಿ ಸಾಗಾಟದ ವಾಹನದಲ್ಲಿ ಸುಮಾರು 10 ರಿಂದ 15 ಹಸುಗಳನ್ನು ಗೋವಧೆಗೆಂದು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆ ಕಾರ್ಯಕರ್ತರು ವಾಹನವನ್ನು ಹಿಂಬಾಲಿಸಿ ತಡೆಹಿಡಿದಿದ್ದಾರೆ.
ಘಟನೆಯಲ್ಲಿ ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದು, ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದಂತೆ ಹಿಂಸಾತ್ಮಕವಾಗಿ ಸಾಗಾಟ ನಡೆಸುತ್ತಿದ್ದ ವಾಹನ ಹಾಗೂ 15 ಕ್ಕೂ ಅಧಿಕ ಗೋವುಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular