spot_img
25.6 C
Udupi
Monday, December 4, 2023
spot_img
spot_img
spot_img

ಪಾಕ್ ಆಕ್ರಮಿತ ಕಾಶ್ಮೀರವನ್ನು ತಕ್ಷಣವೇ ಖಾಲಿ ಮಾಡಿ :ಭಾರತದಿಂದ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದೆ, ನಮ್ಮ ಆಂತರಿಕ ವ್ಯವಹಾರಗಳಲ್ಲಿ ಮಾತನಾಡಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ,ಪಾಕ್ ಆಕ್ರಮಿತ ಕಾಶ್ಮೀರವನ್ನು ತಕ್ಷಣವೇ ಖಾಲಿ ಮಾಡಿ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಪ್ರಥಮ ಕಾರ್ಯದರ್ಶಿ ಪೆಟಲ್ ಗೆಹ್ಲೋಟ್ ಹೇಳಿದ್ದಾರೆ.
ಉತ್ತರಿಸುವ ಹಕ್ಕನ್ನು ಚಲಾಯಿಸಿದ ಗೆಹ್ಲೋಟ್ , “ಪಾಕಿಸ್ತಾನವು ಇತರರ ಆಂತರಿಕ ವ್ಯವಹಾರಗಳನ್ನು ನೋಡುವಾಗ, ಅದು ಮೊದಲು ತನ್ನದೇ ದೇಶದಲ್ಲಿ ಒಟ್ಟು ಮಾನವ ಹಕ್ಕುಗಳ‌ ಉಲ್ಲಂಘನೆಯನ್ನು ನೋಡಬೇಕು ಮತ್ತು ಅದನ್ನು ತಕ್ಷಣ ನಿಲ್ಲಿಸಬೇಕು” ಎಂದು ಹೇಳಿದರು.

“ಮುಂಬೈ ದಾಳಿಯ ಭಯೋತ್ಪಾದಕರ ವಿರುದ್ಧ ನೀವು ಬಲವಾದ ಕ್ರಮ ತೆಗೆದುಕೊಳ್ಳಬೇಕು, ಅವರ ಸಂತ್ರಸ್ತರು 15 ವರ್ಷಗಳ ನಂತರವೂ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ . ಪಾಕಿಸ್ತಾನವು ಅಂತರರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಕೇಂದ್ರವಾಗಿದೆ. ಅವರು ಪಾಕಿಸ್ತಾನವನ್ನು ಭಯೋತ್ಪಾದಕರಿಗೆ ಸುರಕ್ಷಿತ ತಾಣವನ್ನಾಗಿ ಮಾಡಿದ್ದಾರೆ.

ಪಾಕಿಸ್ತಾನವು ವಿಶ್ವದಲ್ಲೇ ಮಾನವ ಹಕ್ಕುಗಳ ಉಲ್ಲಂಘನೆಯ ಅತ್ಯಂತ ಕೆಟ್ಟ ದಾಖಲೆಯನ್ನು ಹೊಂದಿದೆ ಎಂದು ಹೇಳಿದ ಪೆಟಲ್, “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದತ್ತ ಬೆರಳು ತೋರಿಸುವ ಹಕ್ಕು ಯಾರಿಗೂ ಇಲ್ಲ. ಪಾಕಿಸ್ತಾನವು ವಿಶ್ವಸಂಸ್ಥೆಯ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳಲು ಒಗಿಕೊಂಡಿದೆ. ಇದು ಭಾರತದ ವಿರುದ್ಧ ಈ ಜಾಗತಿಕ ವೇದಿಕೆಯನ್ನು ಪದೇ ಪದೇ ದುರುಪಯೋಗಪಡಿಸಿಕೊಳ್ಳುತ್ತದೆ.

ಪಾಕಿಸ್ತಾನದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಜಗತ್ತು ಮನಿಸಬಾರದು ಎಂಬ ಕಾರಣಕ್ಕೆ ಭಾರತದ ವಿರುದ್ಧ ಪದೇ ಪದೇ ಆಧಾರರಹಿತ ಆರೋಪಗಳನ್ನು ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ಪಾಕಿಸ್ತಾನದ ದಾಖಲೆ ತುಂಬಾ ಕಳಪೆಯಾಗಿದೆ.

ಪಾಕಿಸ್ತಾನದ ಮಾನವ ಹಕ್ಕುಗಳ ದಾಖಲೆಯು ವಿಶ್ವದಲ್ಲೇ ಅತ್ಯಂತ ಕೆಟ್ಟದಾಗಿದೆ ಎಂದು ಅವರು ಒತ್ತಿ ಹೇಳಿದರು. ವಿಶೇಷವಾಗಿ ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಗಳ ಸಂದರ್ಭದಲ್ಲಿ, ಪಾಕಿಸ್ತಾನ ಮೊದಲು ತನ್ನ ಆಂತರಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Related Articles

Stay Connected

0FansLike
3,912FollowersFollow
0SubscribersSubscribe
- Advertisement -

Latest Articles