ಕುಂದಾಪುರ : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ 21ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ–2026 ಸೆಪ್ಟೆಂಬರ್ 20ರಂದು ಕುಂದಾಪುರದ ಯುವ ಮೆರಿಡಿಯನ್‌ನಲ್ಲಿ ನಡೆಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು 2,000 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯ B/L ವಿಭಾಗದಲ್ಲಿ ಕುಂದಾಪುರದ ಇಂಪನಾ ಆರ್. ಅವರು ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಇಂಪನಾ ಅವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆ. ಬಿ. ಅವರಿಂದ ತರಬೇತಿ ಪಡೆದಿದ್ದು, ಶಿಕ್ಷಕರಾದ ಮಹಾಲಕ್ಷ್ಮಿ ಹಾಗೂ ದೀಪಾ ಅವರು ಮಾರ್ಗದರ್ಶನ ನೀಡಿರುತ್ತಾರೆ.
ಇಂಪನಾ ಅವರು ಕುಂದಾಪುರದ ನಿವಾಸಿಗಳಾದ ದೀಪಿಕಾ ಜಿ. ಮತ್ತು ರಾಘವೇಂದ್ರ ಶೇರೆಗಾರ್ ಅವರ ಪುತ್ರಿ. ಪ್ರಸ್ತುತ ಅವರು ಕುಂದಾಪುರದ ಶ್ರೀ ವೆಂಕಟರಮಣ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

