ಬಂಟ್ವಾಳ : ಅಕ್ರಮ ಮರಳುಗಾರಿಕೆಯನ್ನು ತಡೆಗಟ್ಟುವ ಸಲುವಾಗಿ ದ.ಕ ಜಿಲ್ಲೆಯ 30 ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸೋಲಾರ್ ವಿದ್ಯುತ್ ಆಧಾರಿತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದೆ.ಇಲಾಖೆಯು ಅತಿ ಹೆಚ್ಚು ಅಕ್ರಮ ಮರಳುಗಾರಿಕೆ ಕುರಿತು ದೂರು ಬರುತ್ತಿದ್ದ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದೆ. ಈ ಮೂಲಕ ಅಕ್ರಮ ಮರಳುಗಾರಿಕೆ ಮೇಲೆ ಕಣ್ಣಿಡಲು ಇಲಾಖೆ ನಿರ್ಧರಿಸಿದೆ.ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ 4 ಕಡೆ ಮತ್ತು ಮಂಗಳೂರು ಕಮಿಷನರೆಟ್ ವ್ಯಾಪ್ತಿಯ 26 ಕಡೆಗಳಲ್ಲಿ ಇಲಾಖೆ ಸಿಸಿ ಕ್ಯಾಮೆರಾವನ್ನು ಅಳವಡಿಸಿದೆ. ಕ್ಯಾಮೆರಾಗಳ ದೃಶ್ಯದ ಮೇಲೆ ಇಲಾಖೆ ನಿರಂತರವಾಗಿ ನಿಗಾ ವಹಿಸಲಿದೆ. ಅಕ್ರಮ ಸಾಗಾಟಕ್ಕೆ ಸಂಬಂಧಿಸಿ ಲಾರಿಯ ನಂಬರ್ ಆಧಾರದಲ್ಲಿ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿದುಬಂದಿದೆ.