ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ಗಳ (ಆರ್ಪಿಸಿ ಮತ್ತು ಕೆಕೆ) ನೇಮಕಾತಿಗೆ ಸಂಬಂಧಿಸಿದ ದೇಹದಾರ್ಡ್ಯ ಪರೀಕ್ಷೆ (PST) ಹಾಗೂ ಸಹಿಷ್ಣುತಾ ಪರೀಕ್ಷೆ (ET) ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ರಾಜ್ಯಾದ್ಯಂತ 19,396 ಅರ್ಹ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ. ಉಳಿಕೆ ಮೂಲ ವೃಂದದ (RPC) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (KK) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.
ಆರ್ಪಿಸಿ ವೃಂದದ ಪರೀಕ್ಷಾ ವಿವರ
ಬೆಂಗಳೂರು ನಗರ: 2,015 ಹುದ್ದೆಗಳಿಗೆ 9,887 ಅಭ್ಯರ್ಥಿಗಳು ಅರ್ಹರಾಗಿದ್ದು, ಸೆ.28ರಿಂದ ಅ.5ರವರೆಗೆ ಪರೀಕ್ಷೆ ನಡೆಯಲಿದೆ. ಚಾಮರಾಜಪೇಟೆಯ ಸಿಎಆರ್ (ಹೆಚ್ಕ್ಯೂ) ಸಿರ್ಸಿ ಸರ್ಕಲ್ ಮೈದಾನ, ಆಡುಗೋಡಿಯ ಸಿಎಆರ್ (ದಕ್ಷಿಣ) ಮೈದಾನ ಹಾಗೂ ತನಿಷಂದ್ರದ ಸಿಎಆರ್ (ಉತ್ತರ) ಪರೇಡ್ ಮೈದಾನಗಳಲ್ಲಿ ಪರೀಕ್ಷೆ ನಡೆಯಲಿದೆ.
ಕೇಂದ್ರ ವಲಯ: 200 ಹುದ್ದೆಗಳಿಗೆ 946 ಅಭ್ಯರ್ಥಿಗಳು ಅರ್ಹರಾಗಿದ್ದು, ಸೆ.28ರಿಂದ ಅ.3ರವರೆಗೆ ಬೆಂಗಳೂರಿನ ಕೊರಮಂಗಲದ 3ನೇ ಬೆಟಾಲಿಯನ್ ಕೆಎಸ್ಆರ್ಪಿ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.
ದಕ್ಷಿಣ ವಲಯ: 395 ಹುದ್ದೆಗಳಿಗೆ 1,891 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಸೆ.28ರಿಂದ ಅ.5ರವರೆಗೆ ಮೈಸೂರಿನ ಸಿಟಿ ಆರ್ಮ್ಸ್ ರಿಸರ್ವ್ ಪರೇಡ್ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.
ಪೂರ್ವ ವಲಯ: 250 ಹುದ್ದೆಗಳಿಗೆ 1,234 ಅಭ್ಯರ್ಥಿಗಳು ಅರ್ಹರಾಗಿದ್ದು, ಸೆ.29ರಿಂದ ಅ.6ರವರೆಗೆ ಶಿವಮೊಗ್ಗದ ನವಿಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.
ಪಶ್ಚಿಮ ವಲಯ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್ಬಾಗ್ನ ಮಂಗಳ ಕ್ರೀಡಾಂಗಣದಲ್ಲಿ ಪರೀಕ್ಷೆ ನಡೆಯಲಿದೆ.
ಉತ್ತರ ವಲಯ: 110 ಹುದ್ದೆಗಳಿಗೆ 549 ಅಭ್ಯರ್ಥಿಗಳು ಅರ್ಹರಾಗಿದ್ದು, ಸೆ.29 ಮತ್ತು 30ರಂದು ಬೆಳಗಾವಿಯ ಮಚ್ಚೆಯಲ್ಲಿರುವ 2ನೇ ಬೆಟಾಲಿಯನ್ ಕೆಎಸ್ಆರ್ಪಿ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.
ಬಳ್ಳಾರಿ ವಲಯ: 30 ಹುದ್ದೆಗಳಿಗೆ 144 ಅಭ್ಯರ್ಥಿಗಳು ಅರ್ಹರಾಗಿದ್ದು, ಅ.5ರಿಂದ 6ರವರೆಗೆ ಕೊಪ್ಪಳದ ಮುನಿರಾಬಾದ್ ಹೊಸಹಳ್ಳಿ ಬಳಿಯ ಕೆಎಸ್ಆರ್ಪಿ ಪಿಟಿಎಸ್ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.
ಕಲ್ಯಾಣ ಕರ್ನಾಟಕ ವೃಂದದ ಪರೀಕ್ಷೆ
ಬೆಂಗಳೂರು ನಗರ (ಕೆಕೆ): 171 ಹುದ್ದೆಗಳಿಗೆ 833 ಅಭ್ಯರ್ಥಿಗಳು ಅರ್ಹರಾಗಿದ್ದು, ಅ.8ರಂದು ಚಾಮರಾಜಪೇಟೆ ಹಾಗೂ ಆಡುಗೋಡಿಯ ಸಿಎಆರ್ ಪರೇಡ್ ಮೈದಾನಗಳಲ್ಲಿ ಪರೀಕ್ಷೆ ನಡೆಯಲಿದೆ.
ಬಳ್ಳಾರಿ ವಲಯ: ಕೊಪ್ಪಳ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಘಟಕಗಳ 174 ಹುದ್ದೆಗಳಿಗೆ 869 ಅಭ್ಯರ್ಥಿಗಳು ಅರ್ಹರಾಗಿದ್ದು, ಅ.12ರಿಂದ 15ರವರೆಗೆ ಮುನಿರಾಬಾದ್ನ ಕೆಎಸ್ಆರ್ಪಿ ಪಿಟಿಎಸ್ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.
ಈಶಾನ್ಯ ವಲಯ: 251 ಹುದ್ದೆಗಳಿಗೆ 1,240 ಅಭ್ಯರ್ಥಿಗಳು ಅರ್ಹರಾಗಿದ್ದು, ಅ.12ರಿಂದ 14ರವರೆಗೆ ಕಲಬುರಗಿಯ ತಾಜ್ ಸುಲ್ತಾನ್ಪುರದ 6ನೇ ಬೆಟಾಲಿಯನ್ ಕೆಎಸ್ಆರ್ಪಿ ಮೈದಾನದಲ್ಲಿ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್ಲೋಡ್ಗೆ ಸೂಚನೆ
ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ಜಾಲತಾಣದಿಂದ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಿಗದಿತ ದಿನಾಂಕದಂದು ಸಂಬಂಧಪಟ್ಟ ದೈಹಿಕ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.

