Monday, July 15, 2024
Homeಉಡುಪಿಲೋಕಸಭಾ ಚುನಾವಣೆ ಹಿನ್ನೆಲೆ ಏ.24-26 ರ ವರೆಗೆ ಮದ್ಯ ಮಾರಾಟ ನಿಷೇಧ

ಲೋಕಸಭಾ ಚುನಾವಣೆ ಹಿನ್ನೆಲೆ ಏ.24-26 ರ ವರೆಗೆ ಮದ್ಯ ಮಾರಾಟ ನಿಷೇಧ

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 24ರಿಂದ ಮದ್ಯ ನಿಷೇಧ ಜಾರಿಗೆ ಬರಲಿದೆ. ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮದ್ಯ ಮುಕ್ತ ದಿನಗಳು ಎಂದು ಘೋಷಿಸಲಾಗಿದೆ.

ಆ ದಿನಗಳಲ್ಲಿ ಎಲ್ಲ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್‌ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular