ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರೆಲ್ಲರೂ ಸಮಾನರು ಶ್ರೀನಿವಾಸ ಕುಳಾಯಿ

0
16

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಉತ್ತರ ವಲಯ ಹಾಗೂ ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ನಮ್ಮ ಅನುದಾನಿತ ಇಡ್ಯಾ ವಿದ್ಯಾದಾಯೀ ಹಿ.ಪ್ರಾ.ಶಾಲೆ ಸುರತ್ಕಲ್. ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 13-11-2026ರಂದು ಸುರತ್ಕಲ್ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಡೆದವು.

ಕಾಯ೯ಕ್ರಮವು ದೀಪಪ್ರ ಜ್ವಲನದೊಂದಿಗೆ ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹಿಂದೂ ವಿದ್ಯಾದಾಯಿನೀ ಸಂಘದ ಕಾಯದರ್ಶಿ ಶ್ರೀರಂಗ ಹೊಸ ಬೆಟ್ಟು ಇವರು ಕಾಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಕಾರ್ಯಕ್ರಮದಲ್ಲಿ ರಾಘವೇಂದ್ರ ಯಚ್.ವಿ ಅಧ್ಯಕ್ಷರು ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘ, ಶ್ರೀ ಶ್ರೀನಿವಾಸ ಕುಳಾಯಿ ಕಾಯ೯ದಶಿ೯ ವಿದ್ಯಾದಾಯಿನೀ ಹಳೆವಿದ್ಯಾರ್ಥಿ ಸಂಘ ಇವರು ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವವರೆಲ್ಲರೂ ಸಮಾನರು ಸೋಲು ಗೆಲುವಿಗೆ ಮೆಟ್ಟಿಲು ಎಂದು ಧನಾತ್ಮಕವಾಗಿ ಸ್ವೀಕರಿಸಿ ಮುನ್ನಡೆಯಬೇಕು ಎಂದು ಹೇಳಿದ್ದು ವೇಣುಗೋಪಾಲ ಸಮೂಹ ಸಂಪನ್ಮೂಲ ವ್ಯಕ್ತಿ ಸುರತ್ಕಲ್ ಕ್ಲಸ್ಟರ್,ಚಂದ್ರಶೇಖರ ಸರಕಾರಿ ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನಕಾಯ೯ದರ್ಶಿ,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಮಲ್ಲಿಕಾ, ಸಂಚಾಲಕಿ ಪಿ.ಕಸ್ತೂರಿ, ವಿದ್ಯಾದಾಯಿನೀ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ದಿವಸ್ಪತಿ ನಿವೃತ್ತ ಮುಖ್ಯೋಪಾಧ್ಯಾಯರಾದ ವಸಂತ ಕುಮಾರ್ ಶಾಲಾ ಮುಖ್ಯೋಪಾಧ್ಯಾಯಿನಿ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಶುಕುಂತಲಾ ಯು ಕಾರ್ಯಕ್ರಮ ನಿರೂಪಿಸಿದರು. ಸುಜಾತ ಯಂ. ಇವರು ವಂದನಾರ್ಪಣೆಗೈದರು.