Wednesday, July 24, 2024
Homeರಾಜಕೀಯಇನ್ನಂಜೆ ಶಕ್ತಿ ಕೇಂದ್ರ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಇನ್ನಂಜೆ ಶಕ್ತಿ ಕೇಂದ್ರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಇನ್ನಂಜೆ ಶಕ್ತಿ ಕೇಂದ್ರದ ಸಭೆ 09-04-2024 ರಂದು ಇನ್ನಂಜೆ ಭಾಗದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್ ಜಿ ಅವರು ಮಾತನಾಡಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಕಳೆದ 10 ವರ್ಷಗಳ ಸಾಧನೆಗಳನ್ನು ಮತ್ತು ಜನಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದು ಹೇಳಿದ ಅವರು ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಮೋದಿ ಅವರನ್ನು ಮಗದೊಮ್ಮೆ ಪ್ರಧಾನಮಂತ್ರಿಯನ್ನಾಗಿಸಲು ನಾವೆಲ್ಲರೂ ಕಟ್ಟಿಬದ್ಧರಾಗೋಣ ಎಂದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ್ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕೋಶಾಧಿಕಾರಿಗಳಾದ ಮಾಲಿನಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ, ಕುರ್ಕಾಲು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಗುರುಕೃಪಾ ರಾವ್, ಇನ್ನಂಜೆ ಶಕ್ತಿ ಕೇಂದ್ರದ ಸಂಚಾಲಕರಾದ ಪ್ರವೀಣ್ ಶೆಟ್ಟಿ, ಸಹ ಸಂಚಾಲಕರಾದ ದಿವೇಶ್ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular