ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಉದ್ಘಾಟನಾ ಸಮಾರಂಭ

0
106

ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಶ್ರೀ. ರವಿಕಾಂತ್ ಮಲ್ಯ ಮಾಜಿ ನಿರ್ದೇಶಕರು, ರುಡ್ ಸೆಟ್ ಸಂಸ್ಥೆ ಬ್ರಹ್ಮಾವರ, ನಿವೃತ್ತ ಮುಖ್ಯ ಪ್ರಭಂದಕರು, ಸಿಂಡಿಕೇಟ್ ಬ್ಯಾಂಕ್ ಅವರು ಮೊಬೈಲ್ ರಿಪೇರಿ ಮತ್ತು ಸೇವೆ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನೀವು ತರಬೇತಿಗೆಂದು ಆಯ್ಕೆ ಮಾಡಿಕೊಂಡ ಸಂಸ್ಥೆ ಬಹಳ ಉನ್ನತ ಮಟ್ಟದ ಸಂಸ್ಥೆಯಾಗಿದೆ. ಮೊದಲನೇ ಹಂತದಲ್ಲಿ ತಮ್ಮನ್ನು ತಾವೂ ಯಶಸ್ವಿಗೊಳಿಸಿದ್ದೀರಿ. ರುಡ್ಸೆಟ್ ಸಂಸ್ಥೆಯು ತಮ್ಮನ್ನು ಸ್ವ ಉದ್ಯೋಗವನ್ನು ಕೈಗೊಳ್ಳಲು ಬೇಕಾಗುವ ಎಲ್ಲಾ ಮಾಹಿತಿಗಳನ್ನು ತರಬೇತಿಯ ಅವಧಿಯಲ್ಲಿ ಒದಗಿಸುತ್ತದೆ. ಮೊಬೈಲ್ ರಿಪೇರಿ ಮತ್ತು ಸೇವೆ ಉದ್ಯಮವು ದಿನದಿಂದ ದಿನಕ್ಕೆ ಬೇಡಿಕೆಯನ್ನು ಹಾಗೂ ಕುತೂಹಲವನ್ನು ಮೂಡಿಸುವ ಉದ್ಯಮವಾಗಿದೆ. ಹಾಗಾಗಿ ಉದ್ಯಮವನ್ನು ನಡೆಸಲು ಬೇಕಾಗುವ ಸಾಲಸೌಲಭ್ಯವನ್ನು ಸಂಸ್ಥೆಯ ಮುಖಾಂತರ ಒದಗಿಸುತ್ತೇವೆ. ಆದ್ದರಿಂದ ತಳಮಟ್ಟದ ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು ಸಮಾಜದಲ್ಲಿ ಯಶಸ್ವಿ ಉದ್ಯಮಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಅದೇ ರೀತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕಾರದ ಶ್ರೀ. ಸಂತೋಷ್ ಶೆಟ್ಟಿ ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು ಇಲ್ಲಿಂದ ಮುಂದುವರಿಯಬೇಕು. ಬಹಳ ವರ್ಷಗಳ ಅನುಭವವಿರುವ ಸಂಪನ್ಮೂಲ ವ್ಯಕ್ತಿಗಳು ಬಂದು ತರಬೇತಿಯನ್ನು ನೀಡುತ್ತಾರೆ. ಯಾವುದೇ ಅಂಜಿಕೆಯಿಲ್ಲದೆ ಆಸಕ್ತಿಯಿಂದ ತರಬೇತಿಯನ್ನು ಪಡೆದುಕೊಂಡು ಸ್ವಉದ್ಯೋಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕವಾಗಿ ಸಧೃಢರಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕಿ ಶ್ರೀಮತಿ. ಚೈತ್ರ . ಕೆ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಹಿರಿಯ ಕಛೇರಿ ಸಹಾಯಕರಾದ ಶ್ರೀ. ರವಿ ವಂದಿಸಿದರು.

LEAVE A REPLY

Please enter your comment!
Please enter your name here