ಬಂಟ್ವಾಳ: ಸಮಾನ ಮನಸ್ಕರು ಸೇರಿ ಸಮಾಜದ ಅಶಕ್ತರಿಗೆ ನೆರವಾಗುವ ದೃಷ್ಟಿಯನ್ನು ಇಟ್ಟುಕೊಂಡು “ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಎಂಬ ಸಂಸ್ಥೆಯನ್ನು ಸ್ಥಾಪಿಸಿ ದಿನಾಂಕ: 03.11.2025 ರಂದು ಬೆಳಿಗ್ಗೆ 9:30 ಕ್ಕೆ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನ ಕಾವಳಮೂಡುರು, ಕಾರಿಂಜ ಇಲ್ಲಿ ಟ್ರಸ್ಟ್ ನ ಉದ್ಘಾಟನೆ ಮತ್ತು ಲಾಂಛನವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಗೂ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಬಿ. ಅರ್ಜುನ್ ಭಂಡಾರ್ಕರ್ ಇವರ ಗೌರವ ಉಪಸ್ಥಿಯೊಂದಿಗೆ ಲೋಕಾರ್ಪಣೆಗೊಳಿಸಲಾಯಿತು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ಬಿ.ಅರ್ಜುನ್ ಭಂಡಾರ್ಕರ್ ಅವರನ್ನು ಸೇರಿರುವ ಎಲ್ಲಾ ಸಭಿಕರ ಮುಂದೆ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.)ಮಡವು ಇದರ ಅಧ್ಯಕ್ಷರಾದ ಸಚಿನ್ ಸುವರ್ಣ, ಕಾರಿಂಜೇಶ್ವರ ದೇವಸ್ಥಾನದ ಅಧ್ಯಕ್ಷರಾದ ವೀರಣ್ಣ ಪೂಜಾರಿ, ಕಾವಳಮೂಡುರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಜಿತ್ ಶೆಟ್ಟಿ ಕಾರಿಂಜ ಹಾಗೂ ಟ್ರಸ್ಟ್ ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರುಗಳು ಮತ್ತು ಕಾರಿಂಜೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ಯಶಸ್ವಿಗೆ ಪ್ರತಕ್ಷ ಹಾಗೂ ಪರೋಕ್ಷವಾಗಿ ಸಹಕಾರವನ್ನು ನೀಡಿದ ಸರ್ವರಿಗೂ ಧನ್ಯವಾದಗಳನ್ನು ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಪದಾಧಿಕಾರಿಗಳು ಸಲ್ಲಿಸಿದರು.

