ಮೂಡುಬಿದಿರೆ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆ ಪ್ರಾರಂಭೋತ್ಸವ

0
7

ಮೂಡುಬಿದಿರೆಯ ಹೆಸರುವಾಸಿ ಹಾಗೂ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾಗಿರುವ ಬಾಬುರಾಜೇಂದ್ರ ಪ್ರಾಢಶಾಲೆಯಲ್ಲಿ ಪ್ರಸಕ್ತ ವರ್ಷದ ಶಾಲಾ ಆರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಪುಸ್ತಕ ವಿತರಿಸಿ ಮಾತನಾಡಿದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಿ ಉತ್ತಮ ಸಾಧನೆ ಮಾಡಿದರೆ ಉಜ್ವಲ ಭವಿಷ್ಯವಿದೆ.

ಹೆತ್ತವರು ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ಕಳುಹಿಸುತ್ತಿರುವುದು ಇಂತಹ ಶಾಲೆಗಳ ಉಳಿವಿಗೆ ಮತ್ತು ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ, ಪ್ರತಿವರ್ಷ ಶಾಲೆಯ ಅಭಿವೃದ್ಧಿಗಾಗಿ ತಾವು ನೀಡುತ್ತಿರುವ 1 ಲಕ್ಷ ರೂಪಾಯಿ ನೆರವನ್ನು ಈ ಬಾರಿಯೂ ನೀಡುವುದಾಗಿ ಘೋಷಿಸಿದರು . ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ , ಸದಸ್ಯರಾದ ಪುಷ್ಟರಾಜ್ ಜೈನ್, ದಾಮೋದರ ಆಚಾರ್ಯ ಹಾಗೂ ಪುಸ್ತಕದ ದಾನಿಗಳಾದ ಮೂಕಾಂಬಿಕ ಭಟ್, ಸುಮ ಪರಾಡ್ಕರ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ತೆರೆಜಾ ಕರ್ಡೋಜ ಸ್ವಾಗತಿಸಿದರು. ಶಿಕ್ಷಕ ಕಿರಣ್ ವಂದಿಸಿದರು. ಭರತ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

ವರದಿ ರಾಯಿ ರಾಜ ಕುಮಾರ

LEAVE A REPLY

Please enter your comment!
Please enter your name here