ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ

0
6

ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು (ಜೂ.1) ಜರಗಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಉದ್ಘಾಟಿಸಿ, ಉಚಿತ ಪಠ್ಯಪುಸ್ತಕ ಮತ್ತು ಬರೆಯುವ ಪುಸ್ತಕಗಳನ್ನು ವಿತರಿಸಿ, ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣಕ್ಕೆ ಹೆಸರು ಪಡೆದಿದ್ದು, ಅವಕಾಶಗಳನ್ನು ಉಪಯೋಗಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಶಾಲೆಯ ಸೌಲಭ್ಯಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲು, ಪೋಷಕರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here