ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಪುಣ್ಚಪ್ಪಾಡಿ ವಿನಾಯಕ ನಗರ ಇದರ ಆಶ್ರಯದಲ್ಲಿ 1843 ನೇ ಮದ್ಯವರ್ಜನ ಶಿಬಿರ ಸವಣೂರಿನ ಪುಣ್ಚಪ್ಪಾಡಿ ಶ್ರೀ ಗೌರಿ ಸದನ ಸಭಾಂಗಣದ ಕೆ. ಎಸ್ .ಎನ್ ನಿಡ್ವಣ್ಣಾಯ ವೇದಿಕೆಯಲ್ಲಿ ಅ. 22 ರಂದು ಉದ್ಘಾಟನೆಗೊಂಡಿತ್ತು.
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ), ಬೆಳ್ತಂಗಡಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನ ಕೇಂದ್ರ ಲಾಯಿಲ ಬೆಳ್ತಂಗಡಿ, ಶ್ರೀ ಗೌರಿ ಗಣೇಶ ಸೇವಾ ಟ್ರಸ್ಟ್ (ರಿ) ವಿನಾಯಕ ನಗರ ಪುಣ್ಚಪ್ಪಾಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಸ್ಟೀಸ್ ಕೆ.ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ಗ್ರಾಮ ಪಂಚಾಯತ್ ಸವಣೂರು, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ, ನವಜೀವನ ಸಮಿತಿ, ಸ್ಥಳಿಯ ಸಂಘ ಸಂಸ್ಥೆಗಳ ಒಕ್ಕೂಟ ಹಾಗೂ ಸಾರ್ವಜನಿಕ ಸಹಯೋಗದಲ್ಲಿ ನಡೆಯುವ
ಈ ಕಾರ್ಯಕ್ರಮವನ್ನು ಶ್ರೀ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಶ್ರೀ ದೇವಿಪ್ರಸಾದ್ ಸುವರ್ಣ ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಕೀಲರಾದ ಶ್ರೀ ಮಹೇಶ್ ಕೆ ಸವಣೂರು ವಹಿಸಿದ್ಧರು. ಮುಖ್ಯ ಅತಿಥಿಗಳಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಶ್ರೀ ಗಣೇಶ್ ಆಚಾರ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಂದರಿ ಬಿ.ಎಸ್, ಎ. ಕೃಷ್ಣ ರೈ, ಶ್ರೀ ಪ್ರವೀಣ್ ಕುಮಾರ್, ಶ್ರೀ ಗಿರೀಶಂಕರ ಸುಲಾಯ, ಶ್ರೀ ದಿನೇಶ್ ಮೆದು, ಹಾಗೂ ಶ್ರೀ ಸಚಿನ್ ಕುಮಾರ್ ಜೈನ್ ಉಪಸ್ಥಿತರಿದ್ದರು. ಯೋಜನಾಧಿಕಾರಿ ಮೇದಪ್ಪ ಗೌಡ ಎನ್ ಸ್ವಾಗತಿಸಿ ಶೀನಪ್ಪ ಶೆಟ್ಟಿ ನೆಕ್ರಾಜೆ ವಂದಿಸಿದರು.