ಕುಕ್ಕುಡೇಲಿನಲ್ಲಿ ಸಮುದಾಯ ಭವನ ಲೋಕಾರ್ಪಣೆ : ಶ್ರೀ ಮಹಮ್ಮಾಯಿ ಉತ್ಸವ

0
21

ಬೆಳುವಾಯಿ : ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘ (ರಿ.), ಕುಕ್ಕುಡೇಲು, ಬೆಳುವಾಯಿ ಇದರ ವತಿಯಿಂದ ಶ್ರೀ ಮಹಮ್ಮಾಯಿ ಮರಾಟಿ ಸಮುದಾಯ ಭವನದ ಲೋಕಾರ್ಪಣೆ, ಶ್ರೀ ಮಹಮ್ಮಾಯಿ ಭಜನಾ ಮಂದಿರದ ಪುನರ್‌ಪ್ರತಿಷ್ಠಾಪನ ವಾರ್ಷಿಕ ವರ್ಧಂತಿ ಉತ್ಸವ ಹಾಗೂ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅಕ್ಟೋಬರ್ 15ರಂದು ನಡೆಯಲಿವೆ.

ಅಂದು ಬೆಳಿಗ್ಗೆ 9 ಗಂಟೆಗೆ ನೂತನ ಸಮುದಾಯ ಭವನದ ಉದ್ಘಾಟನೆ ನಡೆಯಲಿದ್ದು, ಬೆಳಿಗ್ಗೆ 9.30ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ. ಮಧ್ಯಾಹ್ನ 12.30ರಿಂದ ಅನ್ನಸಂತರ್ಪಣೆ ನಡೆಯಲಿದೆ.

ಮಧ್ಯಾಹ್ನ 2 ಗಂಟೆಯಿಂದ ಡ್ಯಾನ್ಸ್ ಬೀಟ್ಸ್ ಹಾಗೂ ಸ್ಥಳೀಯ ಕಲಾವಿದರಿಂದ ಸಂಗೀತ, ನೃತ್ಯ ಸೇರಿದಂತೆ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ನೆರವೇರಲಿದೆ. ರಾತ್ರಿ 9 ಗಂಟೆಯಿಂದ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಿಂಧೂರ ಕಲಾವಿದರು, ಕಾರ್ಲ ಇವರಿಂದ ಸಂದೀಪ್ ಬಾರಾಡಿ ವಿರಚಿತ ತುಳು ಸಾಂಸಾರಿಕ ಹಾಸ್ಯಮಯ ನಾಟಕ ‘ದೊಂಬರಾಟ’ ಪ್ರದರ್ಶನಗೊಳ್ಳಲಿದೆ.

ಕಾರ್ಯಕ್ರಮಕ್ಕೆ ಶ್ರೀ ಮಹಮ್ಮಾಯಿ ಕುಣಿತ ಭಜನ ಮಂಡಳಿ, ಕುಕ್ಕುಡೇಲು ಶುಭಕೋರಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ವತಿಯಿಂದ ವಿನಂತಿಸಲಾಗಿದೆ.