ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ “ದಾವಣಗೆರೆ ಗೃಹಿಣಿ ಸ್ಪರ್ಧೆ- 2024” ಹಮ್ಮಿಕೊಂಡಿದ್ದು ದಿನಾಂಕ 29-3-2024ನೇ ಶುಕ್ರವಾರ ಬೆಳಿಗ್ಗೆ 10:30ಕ್ಕೆ ನಗರದ ಕೆ.ಬಿ. ಬಡಾವಣೆಯ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿ ಸಭಾಂಗಣದಲ್ಲಿ
ಉದ್ಘಾಟನೆ ನಡೆಯಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಲೀಲಾ ಸುಭಾಷ್ ತಿಳಿಸಿದ್ದಾರೆ. ಧಾರವಾಡದ ಖುಷಿ ಸಂಸ್ಕೃತಿ ವಿದ್ಯಾಕೇಂದ್ರದ ಮುಖ್ಯಸ್ಥರಾದ ರೇಣುಕಾದೇವಿಯವರು ಸಮಾರಂಭ ಉದ್ಘಾಟಿಸಲಿದ್ದು ಸಂಸ್ಥೆಯ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆಯ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್‌ರಾದ ಡಿ.ಹೆಚ್.ನಿರ್ಮಲಾ, ಸಂಸ್ಥೆಯ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈ, ಕಲಾಕುಂಚ ಎಂ.ಸಿ.ಸಿ. ಶಾಖೆಯ ಅಧ್ಯಕ್ಷರಾದ ಪ್ರಭಾ ರವೀಂದ್ರ ಅಗಮಿಸಲಿದ್ದಾರೆ. ಅಡುಗೆ ಮನೆಗೆ ಸೀಮಿತವಾದ ಪ್ರತಿಭಾವಂತ ಮಹಿಳೆಯರಲ್ಲಿ ಹುದುಗಿರುವ ಅಪ್ರತಿಮ ಪ್ರತಿಭೆಗಳನ್ನು ಅನಾವರಣಗೊಳಿಸಿ ಅವರಿಗೆ ಸೂಕ್ತವಾದ ವೇದಿಕೆ ಕಲ್ಪಿಸುವ ಸದುದ್ದೇಶದಿಂದ ಹಮ್ಮಿಕೊಳ್ಳಲಾದ ಈ ಮಹಿಳೆಯರ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಮಾರಂಭ ಯಶಸ್ವಿಗೊಳಿಸಬೆಕಾಗಿ ಸಂಸ್ಥೆಯ ಉಪಾಧ್ಯಕ್ಷರಾದ ಗಿರಿಜಮ್ಮ ನಾಗರಾಜಪ್ಪ ವಿನಂತಿಸಿದ್ದಾರೆ.