ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕಲಾಕುಂಚ ಶಾಖೆ ಫೆಬ್ರವರಿ 14 ರಂದು ಶನಿವಾರ ಬೆಳಿಗ್ಗೆ 10-30ಕ್ಕೆ ಶಿರಸಿಯ ಶ್ರೀ ಮಾರಿಕಾಂಬಾ ಪ್ರೌಢಶಾಲಾ ಸಭಾಂಗಣದಲ್ಲಿ ಉದ್ಘಾಟನೆಯಾಗಲಿದೆ ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿಕ್ಷಣ ಕ್ಷೇತ್ರದ ಉಪನಿರ್ದೇಶಕರಾದ ಡಿ.ಆರ್.ನಾಯ್ಕ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಮಾರಿಕಾಂಬಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಶ್‌ನಾಯ್ಕ ವಹಿಸಿಕೊಳ್ಳಲಿದ್ದಾರೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಪೂರ್ವಬಾವಿ ತಯಾರಿ ಸಿದ್ಧತಾ ಉಚಿತ ಕಾರ್ಯಾಗಾರವನ್ನು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ನಡೆಸಿಕೊಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಆರಕ್ಷಕ ವರಿಷ್ಠಾಧಿಕಾರಿಗಳಾದ ಕುಮಾರಿ ಗೀತಾ ಪಾಟೀಲ್, ಶಿರಸಿ ರೋಟರಿ ಕ್ಲಬ್ ಅಧ್ಯಕ್ಷರಾದ ಶ್ರೀನಿವಾಸ ನಾಯ್ಕ, ದಾವಣಗೆರೆಯ ಕಲಾಕುಂಚ ನೂತನ ಅಧ್ಯಕ್ಷರಾದ ವಾಸುದೇವ ಎಲ್.ರಾಯ್ಕರ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ ಆಗಮಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಶಿರಸಿಯ ಶಾಖೆಯ ಅಧ್ಯಕ್ಷರಾದ ಆಶಾ ಅರುಣ್ ಪೈ, ಗೌರವ ಅಧ್ಯಕ್ಷರಾದ ರವಿ ಹೆಗಡೆ ಗಡಿಹಳ್ಳಿ, ಪ್ರಧಾನ ಕಾರ್ಯದರ್ಶಿ ಕಿರಣ್ ಭಟ್ ವೇದಿಕೆಯಲ್ಲಿ ಇರುತ್ತಾರೆ.
ಸಾಂಸ್ಕೃತಿಕ, ಶೈಕ್ಷಣಿಕ ಕಾಳಜಿಯ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಮಾರಂಭ ಯಶಸ್ವಿಗೊಳಿಸಬೇಕಾಗಿ ದಾವಣಗೆರೆ ಕಲಾಕುಂಚದ ಸಮಿತಿ ಸದಸ್ಯರಾದ ಶಿಲ್ಪಾ ಉಮೇಶ್ ವಿನಂತಿಸಿದ್ದಾರೆ.

