26.6 C
Udupi
Tuesday, November 29, 2022
spot_img

ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ನಾಮಫಲಕ ಉದ್ಘಾಟನೆ

ಕಿನ್ನಿಗೋಳಿ: ಸಮಾಜದ ಒಗ್ಗಟ್ಟು ಮತ್ತು ತನ್ನ ಸಮಾಜದ ಜನರ ಜೊತೆಗೆ ಇತರ ಸಮಾಜದವರಿಗೂ ಸಹಾಯ ಹಸ್ತವನ್ನು ನೀಡುವುದೇ ಜಾಗತಿಕ ಬಂಟರ ಸಂಘದ ಒಕ್ಕೂಟದ ಉದ್ದೇಶ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಹೇಳಿದರು. ಅವರು ಗುರುವಾರದಂದು ಮುಲ್ಕಿಯ ಪಡುಬೈಲ್ ಕ್ರಾಸ್ ನಲ್ಲಿ ಜಾಗತಿಕ ಬಂಟರ ಸಂಘದ ಒಕ್ಕೂಟದ ಮೂಲಕ ನಿರ್ಮಾಣವಾಗುತ್ತಿರುವ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಸಂಕೀರ್ಣದ ನಾಮಫಲಕ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಈ ಸಂದರ್ಭ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ನಾಗೇಶ್ ಶೆಟ್ಟಿ ಮಸ್ಕತ್, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ,ಒಕ್ಕೂಟದ ಉಪಾಧ್ಯಕ್ಷ ಕರ್ನೆರೆ ವಿಶ್ವನಾಥ ಶೆಟ್ಟಿ, ಜಯಕರ ಶೆಟ್ಟಿ ಇಂದ್ರಾಳಿ ಮೋಹನದಾಸ ಶೆಟ್ಟಿ ,ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ,ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಸದಸ್ಯ ಯೋಗೀಶ್ ಕೋಟ್ಯಾನ್, ಚಂದ್ರಹಾಸ ಶೆಟ್ಟಿ ,ಸಂತೋಷ್ ಕುಮಾರ್ ಹೆಗ್ಡೆ, ಶಶಿಧರ ಶೆಟ್ಟಿ ,ರತ್ನಾಕರ ಶೆಟ್ಟಿ ಎಕ್ಕಾರ್,ಮುರ ಸದಾಶಿವ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,585FollowersFollow
0SubscribersSubscribe
- Advertisement -spot_img

Latest Articles