ನ.15 ರಂದು ಕಲಾಕುಂಚದಿಂದ ‘ಕರುನಾಡ ಕನ್ನಡ ಕಣ್ಮಣಿ’ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ

0
28

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ 71ನೇ ಕನ್ನಡ ರಾಜ್ಯೋತ್ಸವದ ಪರವಾಗಿ ನವಂಬರ್ 15 ರಂದು ಭಾನುವಾರ ದಾವಣಗೆರೆಯ ಗಡಿಯಾರ ಗೋಪುರದ ಹತ್ತಿರವಿರುವ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆ ಆಗಲಿದೆ ಎಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಯನ್ನು ಅದ್ದೂರಿಯಾಗಿ ವಿಜೃಂಭಣೆ ಯಿಂದ ಪ್ರಧಾನ ಮಾಡಲಾಗುವುದು ಕಲಾಕುಂಚ ಮುತ್ತೈದೆಯರು ಎಲ್ಲಾ ಸಾಧಕರಿಗೆ ಕನ್ನಡ ತಿಲಕವಿಟ್ಟು, ಕನ್ನಡ ಕಂಕಣ ಕಟ್ಟಿ, ಕನ್ನಡಾರತಿ ಬೆಳಗಿ, ಪುಷ್ಪ ವೃಷ್ಟಿಯೊಂದಿಗೆ ಗೌರವಿಸುತ್ತಾರೆ. ನಂತರ ಅವರದೇ ಭಾವಚಿತ್ರವಿರುವ ಸನ್ಮಾನ ಪತ್ರ ಮುದ್ರಿಸಿ, ಪ್ರೇಂ ಮಾಡಿ, ವೇದಿಕೆಯ ಸಿಂಹಾಸನದ ಮೇಲೆ ಕೂರಿಸಿ, ಕನ್ನಡ ಪೇಟಾದೊಂದಿಗೆ ಹಾರ, ಶಾಲು ಕನ್ನಡ ತಾಯಿ ಭುವನೇಶ್ವರಿಯ ಸ್ಮರಣಿಕೆ ಚಿನ್ನದ ಲೇಪನದ ಪದಕ ಕೊರಳಿಗೆ ಹಾಕಿ ಗೌರವಿಸುತ್ತೇವೆ ಎಂದು ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಪ್ರಕಟಿಸಿದ್ದಾರೆ.

ಸಮಾರಂಭದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಕಿನ್ನಿಗೋಳಿಯ ‘ಅನಂತ ಪ್ರಕಾಶ’ ಪ್ರಧಾನ ಸಂಪಾದಕರಾದ ಕೊಡೆತ್ತೂರು ಸಚ್ಚಿದಾನಂದ ಉಡುಪರವರು ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್‌ ರಾಯ್ಕರ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಕರ್ನಾಟಕ ರಾಜ್ಯೋತ್ಸವ ವೈದ್ಯರು, ಸಾಹಿತಿಗಳಾದ ಡಾ|| ಶಶಿಕಲಾ ಕೃಷ್ಣಮೂರ್ತಿ, ಹರಿಹರ ‘ಲೋಕಪ್ರಭ’ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಶ್ರೀಮತಿ ಡಿ.ಎನ್. ಶಾಂಭವಿ, ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ಪತ್ರಕರ್ತರಾದ ಬಿ.ಜೆ. ಅನಂತಪದ್ಮನಾಭರಾವ್, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಸಾಲಿಗ್ರಾಮದ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ. ಈ 71ನೇ ಕನ್ನಡ ರಾಜ್ಯೋತ್ಸವದ ಸಂಭ್ರಮದ ಸಮಾರಂಭಕ್ಕೆ ಎಲ್ಲಾ ಸಾಧಕರು, ಕನ್ನಡ ಅಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ಸಮಿತಿ ಸದಸ್ಯರಾದ ಶಿಲ್ಪಾ ಉಮೆಶ್ ವಿನಂತಿಸಿದ್ದಾರೆ.