ಕಾಪು ವಿಧಾನಸಭಾ ಕ್ಷೇತ್ರದ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆ ಕಮಾನು ರಸ್ತೆ ಅಭಿವೃದ್ಧಿಗೆ 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು 14-03-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಮೀಳಾ ಜತ್ತನ್ನ, ಉಪಾಧ್ಯಕ್ಷರಾದ ಯೋಗೀಶ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯರಾದ ರಾಜೇಶ್ ಅಂಬಾಡಿ, ಕಟಪಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಗುರುಕೃಪಾ, ಶಕ್ತಿ ಕೇಂದ್ರದ ಸಂಚಾಲಕರಾದ ನಾಗರಾಜ್, ಸಹ ಸಂಚಾಲಕರಾದ ಹರ್ಷಿತ್ ಹಾಗೂ ಕೋಟೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪಕ್ಷದ ಪ್ರಮುಖರು, ಹಿರಿಯಡಕ, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.